
ಕಾಸರಗೋಡು: ಲೋಕಸಭಾ ಚುನಾವಣೆಯ ಪ್ರಚಾರಕ್ಕಾಗಿ ಕೇರಳಕ್ಕೆ ಆಗಮಿಸಲಿರುವ ಪ್ರಧಾನಿ ನರೇಂದ್ರ ಮೋದಿ ಅವರನ್ನು ಶಬರಿಮಲೆ ಕ್ಷೇತ್ರಕ್ಕೆ ಕರೆತರಲು ಕೇರಳದ ಬಿಜೆಪಿ ಮುಖಂಡರು ಪ್ರಯತ್ನ ನಡೆಸುತ್ತಿದ್ದಾರೆ.
ರಾಜ್ಯ ನಾಯಕರ ಒಂದು ತಂಡ ಕೇಂದ್ರ ಸಮಿತಿ ಜತೆ ನಿರಂತರ ಮಾತುಕತೆ ನಡೆಸುತ್ತಿದೆ. ಕೇರಳದಲ್ಲಿ ಏ.12, 18ರಂದು ಮೋದಿ ಪ್ರಚಾರ ಮಾಡಲಿದ್ದಾರೆ. ಶಬರಿಮಲೆ ವಿವಾದಕ್ಕೆ ಸಂಬಂಧಿಸಿ ನಡೆಯುತ್ತಿರುವ ಹೋರಾಟದಲ್ಲಿ ಬಿಜೆಪಿ ಮುಂಚೂಣಿಯಲ್ಲಿ ಇದ್ದು, ಪ್ರಧಾನಿ ಮೋದಿ ಶಬರಿಮಲೆ ಭೇಟಿ ಪಕ್ಷಕ್ಕೆ ಹೆಚ್ಚಿನ ಲಾಭ ತಂದೊಡ್ಡಲಿದೆ ಎಂಬುದು ಬಿಜೆಪಿ ಲೆಕ್ಕಾಚಾರ ಎಂದು ಹೇಳಲಾಗಿದೆ.
ಸುರೇಶ್ ಗೋಪಿಗೆ ನೋಟಿಸ್: ಶಬರಿಮಲೆ ಅಯ್ಯಪ್ಪನ ಹೆಸರಲ್ಲಿ ಮತ ಯಾಚಿಸುವ ಮೂಲಕ ಚುನಾವಣಾ ನೀತಿಸಂಹಿತೆ ಉಲ್ಲಂಘನೆ ಆರೋಪಿಸಿ ತ್ರಿಶ್ಯೂರ್ ಲೋಕಸಭಾ ಕ್ಷೇತ್ರದ ಎನ್ಡಿಎ ಅಭ್ಯರ್ಥಿ ಸುರೇಶ್ ಗೋಪಿಗೆ ಜಿಲ್ಲಾ ಮುಖ್ಯ ಚುನಾವಣಾಧಿಕಾರಿ ನೋಟಿಸ್ ಜಾರಿ ಮಾಡಿದ್ದಾರೆ. ನೋಟಿಸ್ಗೆ 48 ಗಂಟೆಯೊಳಗೆ ಉತ್ತರ ನೀಡುವಂತೆಯೂ ಸೂಚಿಸಲಾಗಿದೆ. ಶಬರಿಮಲೆ ವಿಚಾರದಲ್ಲಿ ಸರ್ಕಾರದ ನಿಲುವನ್ನು ಟೀಕಿಸಲಾಗಿದೆ ಹೊರತು ಶಬರಿಮಲೆ ವಿಚಾರದಲ್ಲಿ ಮತ ಕೇಳಿಲ್ಲ ಎಂದು ಬಿಜೆಪಿ ಮಾಧ್ಯಮಗಳಿಗೆ ತಿಳಿಸಿದ್ದು, ಆಯೋಗಕ್ಕೆ ಮಾಹಿತಿ ನೀಡಲಾಗುವುದು ಎಂದಿದೆ.
Leave a Comment