ಗೇರಸೊಪ್ಪಾ : ಸ್ಥಳೀಯ ಸರಕಾರಿ ಪ್ರೌಢಶಾಲೆಯಲ್ಲಿ ಡಾ.ಬಿ.ಆರ್.ಅಂಬೇಡ್ಕರ ರವರ 128ನೇ ಜಯಂತಿ ಆಚರಿಸಲಾಯಿತು. ಸಂವಿಧಾನ ಶಿಲ್ಪಿ, ಭಾರತರತ್ನ ಬಾಬಾಸಾಹೇಬ್ ಅಂಬೇಡ್ಕರರ ಭಾವಚಿತ್ರಕ್ಕೆ ಮಾರ್ಲಾಪಣೆ ಮಾಡಲಾಯಿತು. ಡಾ.ಬಾಬಾ ಸಾಹೇಬ್‍ರ ಜೀವನ ಚರಿತ್ರೆಯ ಕೃತಿ ಪ್ರದರ್ಶಿಸಲಾಯಿತು. ಕಾರ್ಯಕ್ರಮದಲ್ಲಿ ಮುಖ್ಯಾಧ್ಯಾಪಕ ನಾಗರಾಜ ಈಶ್ವರ ಹೆಗಡೆ ಅಧ್ಯಕ್ಷತೆ ವಹಿಸಿದ್ದರು. ಡಾ.ಸುರೇಶ ಎಂ. ತಾಂಡೇಲ್, ಕು. ಅನಿಸಾ ಪೈಲೆಟ್ ಹಾಗೂ ವಿದ್ಯಾರ್ಥಿ ನಾಯಕ ಮನೋಜ ಪಿ. ಹಸ್ಲರ್ ಅತಿಥಿಗಳಾಗಿ ಭಾಗವಹಿಸಿದ್ದರು. ವಿದ್ಯಾರ್ಥಿ ಪ್ರತಿನಿಧಿ ವಿಗ್ನೇಶ್ ನಾಯ್ಕ ಕಾರ್ಯಕ್ರಮದ ಯಶಸ್ವಿಗೆ ಸಹಕರಿಸಿದರು.
Leave a Comment