ಹೊನ್ನಾವರ: ಕಾಂಗ್ರೆಸ ಪಕ್ಷದ ಸ್ಟಾರ್ ಕ್ಯಾಂಪೆನರ್, ಸಚಿವ ಆರ್.ವಿ.ದೇಶಪಾಂಡೆ ದಿ.17ರಂದು ಹೊನ್ನಾವರಕ್ಕೆ ಆಗಮಿಸಿ ಚುನಾವಣಾ ಪ್ರಚಾರ ಭಾಷಣ ಮಾಡಲಿದ್ದಾರೆ ಎಂದು ಹೊನ್ನಾವರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜಗದೀಪ ಎನ್.ತೆಂಗೇರಿ ಮತ್ತು ಮಂಕಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಗೋವಿಂದ ನಾಯ್ಕ ಜಂಟಿ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಅವರು ಅಂದು ಮಧ್ಯಾಹ್ನ 12 ಗಂಟೆಗೆ ಪಟ್ಟಣದ ನ್ಯೂ ಇಂಗ್ಲೀಷÀ ಸ್ಕೂಲ್ ಸಭಾಭವನದಲ್ಲಿ ಕಾಂಗ್ರೆಸ್-ಜೆ.ಡಿ.ಎಸ್.ಮೈತ್ರಿಕೂಟ ಏರ್ಪಡಿಸಿದ ಚುನಾವಣಾ ಪ್ರಚಾರ ಸಭೆಯಲ್ಲಿ ಪಾಲ್ಗೊಂಡು ಆನಂದ ಅಸ್ನೋಟಿಕರ ಪರ ಮತಯಾಚಿಸಲ್ಲಿದ್ದಾರೆ.
ಸಭೆಯಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಭೀಮಣ್ಣ ನಾಯ್ಕ, ಜೆ.ಡಿ.ಎಸ್. ಜಿಲ್ಲಾಧ್ಯಕ್ಷ ಬಿ.ಆರ್.ನಾಯ್ಕ, ಮಾಜಿ ಶಾಸಕಿ ಶ್ರೀಮತಿ ಶಾರದಾ ಎಂ.ಶೆಟ್ಟಿ, ಮಾಜಿ ಶಾಸಕ ಮಂಕಾಳ ವೈದ್ಯ, ಇನ್ನೂ ಮುಂತಾದವರು ಪಾಲ್ಗೊಳ್ಳಲಿದ್ದಾರೆ.
ಹೊನ್ನಾವರ ಮತ್ತು ಮಂಕಿ ಬ್ಲಾಕ್ ಕಾಂಗ್ರೆಸ್ ವ್ಯಾಪ್ತಿಯ ಪಕ್ಷದ ಮುಖಂಡರುಗಳು, ಕಾರ್ಯಕರ್ತರು, ಅಭಿಮಾನಿಗಳು, ಅಪಾರ ಸಂಖ್ಯೆಯಲ್ಲಿ ಪಾಲ್ಗೊಂಡು ಕಾರ್ಯಕ್ರಮವನ್ನು ಯಾಶಸ್ವಿsಗೊಳಿಸುವಂತೆ ಅವರು ಮನವಿ ಮಾಡಿದ್ದಾರೆ.
Leave a Comment