• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಮತದಾನ ಕಡ್ಡಾಯಗೊಳಿಸಬೇಕು ಹಾಗೂ ಮತದಾನ ಮಾಡದಿದ್ದರೇ ಅಪರಾಧವೆಂದು ಪರಿಗಣಿಸುವ ಕಾನೂನು ಜಾರಿಯಾಗಬೇಕು- ಸಚಿವ ಆರ್.ವಿ.ದೇಶಪಾಂಡೆ.

April 20, 2019 by Yogaraj SK Leave a Comment

download

ಹಳಿಯಾಳ:- ಭಾರತ ದೇಶದಲ್ಲಿ ಮತದಾನವನ್ನು ಕಡ್ಡಾಯಗೊಳಿಸಬೇಕು ಹಾಗೂ ಮತದಾನ ಮಾಡದೇ ಇದ್ದರೇ ಅದನ್ನು ಅಪರಾಧವೆಂದು ಪರಿಗಣಿಸುವ ಕಾನೂನು ಜಾರಿಯಾಗಬೇಕು ಎಂದು ಕಂದಾಯ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ.ದೇಶಪಾಂಡೆ ಹೇಳಿದರು.
ಪಟ್ಟಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು ರಾಜ್ಯದ 14 ಲೋಕಸಭಾ ಕ್ಷೇತ್ರಗಳಲ್ಲಿ ಒಂದು ಹಂತದ ಮತದಾನ ಮುಕ್ತಾಯಗೊಂಡಿದ್ದು ಅಭ್ಯರ್ಥಿಗಳ ಭವಿಷ್ಯ ಮತಪೆಟ್ಟಿಗೆಯಲ್ಲಿ ಭಧ್ರವಾಗಿದೆ ಎಂದರು.
ಇನ್ನೂ ಸಿಲಿಕಾನ್ ಸೀಟಿ, ಸಿಲಿಕಾನ್ ವ್ಯಾಲಿ, ಗಾರ್ಡನ್ ಸೀಟಿ, ಐಟಿ-ಬಿಟಿ ನಗರ ಎಂದು ಕರೆದುಕೊಳ್ಳುವ ಜಾಗತಿಕ ಮಟ್ಟದಲ್ಲಿ ಹೆಸರು ಮಾಡಿರುವ ಉನ್ನತ ಪದವಿಧರರು, ಸುಶೀಕ್ಷಿತರು, ಆರ್ಥಿಕ ಸಂಪನ್ನರನ್ನು ಹೆಚ್ಚು ಒಳಗೊಂಡಿರುವ ಬೆಂಗಳೂರಿನಲ್ಲಿ ಪ್ರತಿಬಾರಿ ಕಡಿಮೆ ಮತದಾನವಾಗುತ್ತಿರುವುದು ಉತ್ತಮ ಬೆಳವಣಿಗೆಯಲ್ಲ. ಮತದಾನ ಮಾಡದಿರುವುದು ಸರಿಯಾದ ಕ್ರಮವಲ್ಲ ಎಂದು ಸಚಿವರು ಬೇಸರ ವ್ಯಕ್ತಪಡಿಸಿದರು.
ರಾಷ್ಟ್ರದ ಚುಕ್ಕಾಣಿ ಯಾರ ಬಳಿ ಇರಬೇಕೆಂಬ ನಿರ್ಣಯ ಕೈಗೊಳ್ಳುವ ಹಾಗೂ ರಾಷ್ಟ್ರದ ಸರ್ವಾಂಗೀಣ ಅಭಿವೃದ್ದಿಗೆ ಪವಿತ್ರವಾದ ಮತದಾನ ಮಾಡುವುದು ಅವಶ್ಯಕವಾಗಿದೆ. ಐದು ವರ್ಷಕ್ಕೆ ಕೇವಲ 2-3 ಬಾರಿ ಮಾತ್ರ ಮತ ಚಲಾಯಿಸುವ ಅವಕಾಶವಿರುತ್ತದೆ ಆದರೂ ಸುಶೀಕ್ಷಿತ, ಪ್ರಜ್ಞಾವಂತ ಜನರೇ ಮತದಾನ ಮಾಡದೇ ಅಸಡ್ಡೆ ತೊರುವುದು ಸರಿಯಲ್ಲ ಎಂದರು.
ಪ್ರತಿದಿನ ಯಾರು ತಮ್ಮ ಸಮಸ್ಯೆಗಳ ಬಗ್ಗೆ ಮಾತನಾಡುತ್ತಾರೋ, ಮೂಲಭೂತ ಸೌಕರ್ಯಗಳ ಬಗ್ಗೆ ಮಾತನಾಡುತ್ತಾರೋ ಅವರೇ ಮತ ಚಲಾಯಿಸುವುದಿಲ್ಲ ಎಂದ ಸಚಿವರು ಪವಿತ್ರವಾದ ಮತ ಚಲಾಯಿಸುವ ಮೂಲಕ ಮಾತನಾಡುವ ಕೆಲಸವನ್ನು ಜನತೆ ಮಾಡಬೇಕು. ಮತ ಚಲಾಯಿಸಿದರೇ ಅಭಿವೃದ್ದಿ ಎನ್ನುವುದನ್ನು ಪ್ರತಿಯೊಬ್ಬ ಪ್ರಜೆ ಅರಿತು ನಡೆಯಬೇಕು ಎಂದು ಕಿವಿ ಮಾತು ಹೇಳಿದರು.
ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮತದಾನಕ್ಕೆ ತೀರಾ ಮಹತ್ವವಿದೆ. ಮತದಾನ ಕಡ್ಡಾಯವಾಗಬೇಕಾದ ಅನಿವಾರ್ಯತೆ ಕಾಣಿಸುತ್ತಿದೆ ಎಂದ ಸಚಿವ ದೇಶಪಾಂಡೆ ದಿ.23 ರಂದು ಎಲ್ಲರೂ ಕಡ್ಡಾಯವಾಗಿ ಅಮೂಲ್ಯವಾದ ಮತವನ್ನು ಚಲಾಯಿಸುವ ಮೂಲಕ ಉತ್ತಮ ಅಭ್ಯರ್ಥಿಗಳನ್ನು ಆಯ್ಕೆ ಮಾಡುವಂತೆ ಕರೆ ನೀಡಿದರು.
ಇನ್ನೂ ರಾಜ್ಯದಲ್ಲಿ ಕಾಂಗ್ರೇಸ್ ಜೆಡಿಎಸ್ ಮೈತ್ರಿ ಅಭ್ಯರ್ಥಿಗಳು 21-22 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಲಿದ್ದಾರೆಂದು ವಿಶ್ವಾಸ ವ್ಯಕ್ತಪಡಿಸಿದರು.

Table of Contents

Toggle
  • Share this:
  • Related News:

Share this:

  • Share on WhatsApp (Opens in new window) WhatsApp
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Email a link to a friend (Opens in new window) Email
  • Print (Opens in new window) Print

Related News:

Filed Under: Canara News, Haliyal News Tagged With: garden seat, IT-BT city, law enforcement, mandating, Minister of State for Civil Aviation, minister RV Deshpande, polling in the ballot box, prospects of candidates, Silicon Valley, silicon whistle, The government has to take legal steps to ensure that the country's steering, voting, voting mandate

Explore More:

About Yogaraj SK

Yograj typically covers local news from Haliyal

Subscribe to News from Yogaraj

Reader Interactions

Leave a CommentCancel reply

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,217,060 visitors

Footer

ಕರ್ನಾಟಕ ಟೂರಿಸಂ ಅವಾರ್ಡ್ಸ್: ಉತ್ತರ ಕನ್ನಡ ಜಿಲ್ಲೆಯ ನಾಲ್ಕು ಸಂಸ್ಥೆಗಳಿಗೆ ಐದು ಪ್ರಶಸ್ತಿ

September 29, 2026 By Sachin Hegde

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar

Loading Comments...