
ಬೆಂಗಳೂರು: ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಹಿರಿಯ ರಂಗಕರ್ಮಿ ಮಾಸ್ಟರ್ ಹಿರಣ್ಣಯ್ಯ ಅವರು ಗುರುವಾರ ವಿಧಿವಶರಾಗಿದ್ದಾರೆ.
ಮಾಸ್ಟರ್ ಹಿರಣ್ಣಯ್ಯ ಅವರ ಲಂಚಾವತಾರ, ನಡುಬೀದಿ ನಾರಾಯಣ ಮೊದಲಾದ ನಾಟಕಗಳು ಜನಮಾನಸದಲ್ಲಿ ಹಚ್ಚ ಹಸಿರಾಗಿ ಉಳಿಯುವಂತವು.
ಸಮಾಜದ ಪಿಡುಗುಗಳಿಗೆ ವಿಡಂಬನೆಯ ಚುಚ್ಚುಮದ್ದು ನೀಡುವುದು ಅವರ ವೈಶಿಷ್ಟ್ಯವಾಗಿತ್ತು ಎಂದು ಅವರ ನಿಧನಕ್ಕೆ ಸಂತಾಪ ಸೂಚಿಸಿರುವ ಮುಖ್ಯಮಂತ್ರಿ ಹೆಚ್‍ಡಿ ಕುಮಾರಸ್ವಾಮಿ, ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ, ಮಾಜಿ ಸಿಎಮ್ ಸಿದ್ದರಾಮಯ್ಯ ಸೇರಿದಂತೆ ಗಣ್ಯರು ಹೆಳಿದ್ದಾರೆ.

Leave a Comment