• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಕ.ರಾ. ಕಾರ್ಯನಿರತ ಪತ್ರಕರ್ತರ ಸಂಘದ 86ನೇ ಸರ್ವ ಸದಸ್ಯರ ಸಭೆಯಲ್ಲಿ ಹಲವು ಸಲಹೆ ಸೂಚನೆ ನೀಡಿದ ಸಂಘದ ಉಕ ಜಿಲ್ಲಾಧ್ಯಕ್ಷ ರಾಧಾಕೃಷ್ಣ ಭಟ್ಟ ಭಟ್ಕಳ

June 5, 2019 by Yogaraj SK Leave a Comment

watermarked IMG 20190604 WA0077
ಭಟ್ಕಳ: ಹಾಸನದಲ್ಲಿ ಡಾ. ರಾಜೀವ್ ಸಮೂಹ ಶಿಕ್ಷಣ ಸಂಸ್ಥೆಗಳ ಆವರಣದಲ್ಲಿರುವ ಡಾ. ರಾಜೀವ್ ಸಭಾಂಗಣದಲ್ಲಿ ನಡೆದ ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ 86ನೇ ಸರ್ವ ಸದಸ್ಯರ ಸಭೆಯಲ್ಲಿ ಉತ್ತರ ಕನ್ನಡ ಜಿಲ್ಲೆಯಿಂದ ಭಾಗವಹಿಸಿದ್ದ ಜಿಲ್ಲಾಧ್ಯಕ್ಷ ರಾಧಾಕೃಷ್ಣ ಭಟ್ಟ ಭಟ್ಕಳ ಅವರು ಹಲವಾರು ಸಲಹೆ ಸೂಚನೆಗಳನ್ನು ನೀಡಿದರು.
ವಿಷಯ ಪ್ರಸ್ತಾಪಿಸಿದ ರಾಧಾಕೃಷ್ಣ ಭಟ್ಟ ಅವರು ರಾಜ್ಯದಲ್ಲಿ ರಾಜಕೀಯ ಶಕ್ತಿಯನ್ನು ಬಳಸಿ ಇಲ್ಲವೇ ಪೊಲೀಸ್ ಬಲವನ್ನು ಬಳಸಿ ಅನೇಕ ಪತ್ರಕರ್ತರನ್ನು ದಮನ ಮಾಡುವ ಇಲ್ಲವೇ ಅವರಿಗೆ ಬೆದರಿಸುವ ತಂತ್ರವನ್ನು ಹೆಣೆಯಲಾಗುತ್ತಿದೆ. ಇಂತಹ ಹಲವಾರು ಪ್ರಕರಣಗಳು ರಾಜ್ಯದಲ್ಲಿ ನಡೆದಿದ್ದು ಇದನ್ನು ತಡೆಯಲು ರಾಜ್ಯ ಸರಕಾರ ಮುಂದಾಗಬೇಕು. ಈ ಕುರಿತು ಸರ್ವ ಸದಸ್ಯರ ಸಭೆಯಲ್ಲಿ ಠರಾಯಿಸಿ ರಾಜ್ಯ ಸರಕಾರಕ್ಕೆ ಈ ಕುರಿತು ಸೂಕ್ತ ಕ್ರಮಕ್ಕೆ ಕೋರಬೇಕು ಎಂದರು.
ನಮ್ಮ ಸಂಘಟನೆಯ 1932ರಷ್ಟು ಹಿಂದೆಯೇ ಕಾರ್ಮಿಕ ಇಲಾಖೆಯಲ್ಲಿ ನೋಂದಣಿಯಾಗಿರುವ ಸಂಘಟನೆಯಾಗಿದೆ ಎನ್ನುವುದು ಎಲ್ಲರಿಗೂ ತಿಳಿದಿದೆ.
ನಮ್ಮ ಸಂಘಟನೆಯಲ್ಲಿ ಸ್ವಲ್ಪ ವ್ಯತ್ಯಾಸವಾದರೂ ಕಾರ್ಮಿಕ ಇಲಾಖೆಯ ಅಧಿಕಾರಿಗಳು ಹದ್ದಿನ ಕಣ್ಣಿಡುತ್ತಾರೆ. ಅಲ್ಲದೇ ಅನೇಕ ಕಟ್ಟುಪಾಡುಗಳನ್ನು ನಾವು ಪಾಲಿಸಿಕೊಂಡು ಬಂದಿದ್ದೇವೆ.
 ಆದರೆ ಇನ್ನೂ ತನಕ ಯಾವೊಂದು ಸದಸ್ಯನಿಗೂ ಕೂಡಾ ಕಾರ್ಮಿಕ ಇಲಾಖೆಯ ಸೌಲಭ್ಯವನ್ನು ಪಡೆದುಕೊಳ್ಳುವಲ್ಲಿ ಸದಸ್ಯರಿಗೆ ಸಾಧ್ಯವಾಗಿಲ್ಲ.
ಈ ಕುರಿತು ರಾಜ್ಯ ಸಂಘದ ವತಿಯಿಂದ ಕ್ರಮ ಕೈಗೊಂಡು ಕಾರ್ಮಿಕ ಇಲಾಖೆಯ ಸೌಲಭ್ಯವನ್ನು ನಮಗೂ ವಿಸ್ತರಿಸುವಲ್ಲಿ ಸರಕಾರದ ಮೇಲೆ ಒತ್ತಡ ಹೇರಬೇಕು ಎಂದು ಕೋರಿದರು.
ಈಗಾಗಲೇ ಆರೋಗ್ಯ ಕರ್ನಾಟಕ ಯೋಜನೆಯಡಿಯಲ್ಲಿ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ಸದಸ್ಯರಿಗೆ ಉಚಿತ ಚಿಕಿತ್ಸೆಯನ್ನು ನೀಡುವ ಕುರಿತು ಸರಕಾರ ಆದೇಶ ಮಾಡಿದ್ದನ್ನು ಸ್ವಾಗತಿಸಿ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಅವರಿಗೆ ಅಭಿನಂದಿಸಿದರು.
ಅಲ್ಲದೇ ರಾಜ್ಯ ಸಂಘದ ಕುರಿತು ಹಲವರು ಸಾಮಾಜಿ ಜಾಲ ತಾಣದಲ್ಲಿ ಇಲ್ಲದ ಸಲ್ಲದ ಸುದ್ದಿಗಳನ್ನು ಹರಿಯ ಬಿಡುತ್ತಿದ್ದು ಇದು ರಾಜ್ಯ ಸಂಘದ ಗೌರವಕ್ಕೆ ಮತ್ತು ಪದಾಧಿಕಾರಿಗಳ ಗೌರವಕ್ಕೆ ಕುತ್ತು ತರುತ್ತಿದೆ. ಇಂತಹ ಜಾಲ ತಾಣಗಳಲ್ಲಿ ಸುಳ್ಳು ಸುದ್ದಿಗಳನ್ನು ಹಾಕುವವರ ವಿರುದ್ಧ ಕ್ರಮ ಜರುಗಿಸಬೇಕು ಎಂದು ಈ ಹಿಂದೆಯೇ ಕಾರ್ಯಕಾರಿ ಸಭೆಯಲ್ಲಿ ತೀರ್ಮಾನಿಸಲಾಗಿದ್ದು ಅದನ್ನು ಜ್ಯಾರಿಗೆ ತರಬೇಕು ಎಂದು ಒತ್ತಾಯಿಸಿದರು.
ಸಂಘದ ವತಿಯಿಂದ ಮಾಧ್ಯಮ ಅಕಾಡೆಮಿಗೆ ಹೆಸರುಗಳನ್ನು ಶಿಫಾರಸು ಮಾಡುವಾಗ ಈ ಹಿಂದೆ ಮಾಧ್ಯಮ ಅಕಾಡೆಮಿಯ ಸದಸ್ಯರಾದವರ ಹೆಸರನ್ನು ಹೊರತು ಪಡಿಸಿ ಶಿಫಾರಸು ಮಾಡಬೇಕು.
ಹೊಸಬರಿಗೆ ಅವಕಾಶ ಮಾಡಿಕೊಡಬೇಕು ಎಂದು ಸಭೆಯ ಗಮನಕ್ಕೆ ತಂದಿದ್ದಾರೆ.

Share this:

  • WhatsApp
  • Twitter
  • Facebook
  • Telegram
  • Email
  • Print

Related News:

Filed Under: Bhatkal News, Canara News Tagged With: .ಕಾರ್ಮಿಕ ಇಲಾಖೆಯ ಅಧಿಕಾರಿಗಳು, and many restrictions, Bhatkal, K.R. At the 86th All-India Meeting of the Working Journalists' Association, Karnataka State Working Journalists Association, many journalists, or by using police force, Rajiv Group Education Institute, several suggestions were issued, The Department of Labor, the eagle, the Uka district president Radhakrishna Bhatta, using political power, we have been pursuing, ಅಲ್ಲದೇ ಅನೇಕ ಕಟ್ಟುಪಾಡುಗಳನ್ನು, ಇಲ್ಲವೇ, ಕ.ರಾ. ಕಾರ್ಯನಿರತ ಪತ್ರಕರ್ತರ ಸಂಘದ 86ನೇ ಸರ್ವ ಸದಸ್ಯರ ಸಭೆಯಲ್ಲಿ, ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘ, ಕ್ರಮ ಕೈಗೊಂಡು ಕಾರ್ಮಿಕ ಇಲಾಖೆ, ಡಾ. ರಾಜೀವ್ ಸಮೂಹ ಶಿಕ್ಷಣ ಸಂಸ್ಥೆ, ನಾವು ಪಾಲಿಸಿಕೊಂಡು ಬಂದಿದ್ದೇವೆ, ನೀಡಿದ, ಪೊಲೀಸ್ ಬಲವನ್ನು ಬಳಸಿ ಅನೇಕ ಪತ್ರಕರ್ತರ, ಭಟ್ಕಳ, ರಾಜಕೀಯ ಶಕ್ತಿಯನ್ನು ಬಳಸಿ, ಸಂಘದ ಉಕ ಜಿಲ್ಲಾಧ್ಯಕ್ಷ ರಾಧಾಕೃಷ್ಣ ಭಟ್ಟ, ಹದ್ದಿನ ಕಣ್ಣಿಡುತ್ತಾರೆ, ಹಲವು ಸಲಹೆ ಸೂಚನೆ

Explore More:

About Yogaraj SK

Yograj typically covers local news from Haliyal

Subscribe to News from Yogaraj

Reader Interactions

Leave a Comment Cancel reply

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2025 Canara Buzz · Contributors · Privacy Policy · Terms & Conditions · Member of Digital Avatar

 

Loading Comments...