• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ದಾರಿ ಸಮಸ್ಯೆ ಬಗೆಹರಿಸಿ ಕೊಡುವಂತೆ ಆಗ್ರಹಿಸಿ ರೈತರಿಂದ ಪ್ರತಿಭಟನೆ‌

June 18, 2019 by Yogaraj SK Leave a Comment

DARIGAGi raitara pratibhatane

ಹಳಿಯಾಳ:- ತಾಲೂಕಿನ ಮುತ್ತಲಮುರಿ ಗ್ರಾಮದಿಂದ ಕಿವಡೆಬೈಲ್ ಗ್ರಾಮಕ್ಕೆ ಹೊಲದಲ್ಲಿ ತಾತ್ಕಾಲಿಕ ದಾರಿ ವ್ಯವಸ್ಥೆ ಮಾಡಿಕೊಡುವಂತೆ ಆಗ್ರಹಿಸಿ ಮುತ್ತಲಮುರಿ ಭಾಗದ ನೂರಾರು ರೈತರು ಸೋಮವಾರ ಹಳಿಯಾಳದ ಮಿನಿ ವಿಧಾನಸೌಧದ ಎದುರು ಪ್ರತಿಭಟನೆ ನಡೆಸಿದರು.
3 ಟ್ರಾಕ್ಟರ್, ಟ್ರಾಕ್ಸ್ ಹಾಗೂ ದ್ವಿಚಕ್ರ ವಾಹನಗಳಲ್ಲಿ ಆಗಮಿಸಿದ್ದ ರೈತರು ಜಮೀನುಗಳಿಗೆ ಓಡಾಡಲು ಶಾಶ್ವತ ದಾರಿ ಮಾಡಿಕೊಟ್ಟು ರೈತರ ದಾರಿ ಸಮಸ್ಯೆಗೆ ಪರಿಹಾರ ಕಲ್ಪಿಸಬೇಕೆಂದು ಆಗ್ರಹಿಸಿ ತಹಶೀಲ್ದಾರ್ ಅವರಿಗೆ ಮನವಿ ಸಲ್ಲಿಸಿದರು.
ದಾರಿ ಸಮಸ್ಯೆಯ ಬಗ್ಗೆ ಈ ಹಿಂದೆ ತಾಲೂಕಾಡಳಿತಕ್ಕೆ ಮನವಿ ಸಲ್ಲಿಸಿದ ಸಂದರ್ಭದಲ್ಲಿ ತಾತ್ಕಾಲಿಕವಾಗಿ ದಾರಿ ಮಾಡಿಕೊಡುವ ವ್ಯವಸ್ಥೆ ಮಾಡಿದ್ದರು. ಆದರೇ ದಾರಿ ಮಧ್ಯ ಜಮೀನು ಇರುವ ರೈತರು ಸದ್ಯ ತಕರಾರು ಮಾಡಿ ದಾರಿ ಬಂದ್ ಮಾಡಿದ್ದರಿಂದ ಬಿತ್ತನೆಯ ಸಮಯದಲ್ಲಿ ದಾರಿ ಸಂಪೂರ್ಣ ಬಂದ ಆಗಿದ್ದರಿಂದ ರೈತರಿಗೆ ಸಾಕಷ್ಟು ಅನಾನುಕೂಲವಾಗಿದೆ ಎಂದು ರೈತರು ತಮ್ಮ ಅಳಲನ್ನು ತೊಡಿಕೊಂಡಿದ್ದಾರೆ.
ಪ್ರತಿಭಟನೆ ಸಂದರ್ಭದಲ್ಲಿ ಸ್ಥಳಕ್ಕೆ ಆಗಮಿಸಿದ ತಹಶೀಲ್ದಾರ್ ವಿದ್ಯಾಧರ ಗುಳಗುಳಿ ಹಾಗೂ ರೈತರ ಮಧ್ಯೆ ಮಾತಿನ ಚಕಮಕಿಯೂ ನಡೆಯಿತು. ಕೊನೆಗೂ ರೈತರ ಮನವೊಲಿಸುವಲ್ಲಿ ಯಶಸ್ವಿಯಾದ ಗುಳಗುಳಿ ಅವರು ಶಾಶ್ವತ ಪರಿಹಾರ ಕಲ್ಪಿಸಿ ಕೊಡುವ ಭರವಸೆ ನೀಡಿದ್ದರಿಂದ ಪ್ರತಿಭಟನೆ ಸ್ಥಗೀತಗೊಳಿಸಿದರು. ಆದರೇ ದಿ.18 ರಂದೇ ಸಮಸ್ಯೆಗೆ ಪರಿಹಾರ ಒದಗಿಸಬೇಕು ಇಲ್ಲವಾದಲ್ಲಿ ದಿ.19 ರಂದು ತಮ್ಮ ದನಕರುಗಳೊಂದಿಗೆ ಕಚೇರಿ ಎದುರು ಧರಣಿ ಸತ್ಯಾಗ್ರಹ ನಡೆಸುವುದಾಗಿ ರೈತರು ತಾಲೂಕಾಡಳಿತಕ್ಕೆ ಎಚ್ಚರಿಕೆ ನೀಡಿದ್ದಾರೆ.
ಪ್ರತಿಭಟನೆಯಲ್ಲಿ ರೈತರಾದ ಯಲ್ಲಪ್ಪಾ ಮಾಂಗಲಿ, ಅರುಣ ಮಿರಾಶಿ, ನಾರಾಯಣ ಕೆಸರೆಕರ, ನಾಮದೇವ ಮಿಶಾಳೆ, ರಾಮದೇವ ಕಡೊಲ್ಕರ, ಬಾಳುಂದ್ರಿ, ರಾಮಾ ಪವಾರ, ಅಶೋಕ ಜೈನ, ಮಂಗಳು ಜಾಧವ, ನಂದಾ ಗೌಡಾ, ಅರ್ಜುನ , ಪರಶುರಾಮ, ಯಲ್ಲಪ್ಪಾ ಗೌಡಾ ಮೊದಲಾದವರು ಇದ್ದರು.

Table of Contents

Toggle
  • Share this:
  • Related News:

Share this:

  • Share on WhatsApp (Opens in new window) WhatsApp
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Email a link to a friend (Opens in new window) Email
  • Print (Opens in new window) Print

Related News:

Filed Under: Canara News, Haliyal News, SIDDAPURA Tagged With: Farmer Talking to Farmers, field, Kiwadebail Village, Muttalamuri Village, Permanent Way to Move Farmers to Lands, Protests from Farmers, Resistance by Farmers, Tehsildar Vidyadhar Guligi, Tracks and Two Wheels, tractor, ಕಿವಡೆಬೈಲ್ ಗ್ರಾಮಕ್ಕೆ, ಟ್ರಾಕ್ಟರ್, ಟ್ರಾಕ್ಸ್ ಹಾಗೂ ದ್ವಿಚಕ್ರ ವಾಹನ, ತಹಶೀಲ್ದಾರ್ ವಿದ್ಯಾಧರ ಗುಳಗುಳಿ ನೆರೆ ಸಂತ್ರಸ್ಥರ ಪರಿಹಾರ ನಿಧಿ, ದಾರಿ ಸಮಸ್ಯೆ ಬಗೆಹರಿಸಿ ಕೊಡುವಂತೆ ಆಗ್ರಹಿಸಿ, ಮುತ್ತಲಮುರಿ ಗ್ರಾಮದಿಂದ, ರೈತರ ಮಧ್ಯೆ ಮಾತಿನ ಚಕಮಕಿ, ರೈತರಿಂದ ಪ್ರತಿಭಟನೆ, ರೈತರು ಜಮೀನುಗಳಿಗೆ ಓಡಾಡಲು ಶಾಶ್ವತ ದಾರಿ, ಹೊಲದಲ್ಲಿ ತಾತ್ಕಾಲಿಕ ದಾರಿ ವ್ಯವಸ್ಥೆ

Explore More:

About Yogaraj SK

Yograj typically covers local news from Haliyal

Subscribe to News from Yogaraj

Reader Interactions

Leave a CommentCancel reply

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,217,058 visitors

Footer

ಕರ್ನಾಟಕ ಟೂರಿಸಂ ಅವಾರ್ಡ್ಸ್: ಉತ್ತರ ಕನ್ನಡ ಜಿಲ್ಲೆಯ ನಾಲ್ಕು ಸಂಸ್ಥೆಗಳಿಗೆ ಐದು ಪ್ರಶಸ್ತಿ

September 29, 2026 By Sachin Hegde

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar

Loading Comments...