
ಹಳಿಯಾಳ:- ಪಠ್ಯದೊಂದಿಗೆ ಪಠ್ಯೇತರ ಚಟುವಟಿಕೆಗಳಾದ ಕ್ರೀಡೆಯಲ್ಲೂ ಆಸಕ್ತಿ ವಹಿಸಿ ಸಾಧನೆ ಮಾಡುವ ಮೂಲಕ ಉತ್ತಮ ಆರೋಗ್ಯವನ್ನು ಹೊಂದುವಂತೆ ವಿಧಾನ ಪರಿಷತ್ ಸದಸ್ಯ ಎಸ್ ಎಲ್ ಘೋಟ್ನೇಕರ ವಿದ್ಯಾರ್ಥಿಗಳಿಗೆ ಕರೆ ನೀಡಿದರು.
ಪಟ್ಟಣದ ಶ್ರೀ ಛತ್ರಪತಿ ಶಿವಾಜಿ ಕ್ರೀಡಾಂಗಣದಲ್ಲಿ ಏರ್ಪಡಿಸಲಾದ 2019-20 ನೇ ಸಾಲಿನ ಹಳಿಯಾಳ ತಾಲೂಕಾ ಮಟ್ಟದ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳ ಕ್ರೀಡಾಕೂಟ ಉದ್ಘಾಟಿಸಿ ಮಾತನಾಡಿದರು.

ಹಳಿಯಾಳ ಸಿಪಿಐ ಲೋಕಾಪುರ ಬಿಎಸ್ ಮಾತನಾಡಿ ವಿದ್ಯಾರ್ಥಿಗಳು ಕ್ರೀಡಾ ಮನೋಭಾವನೆಯಿಂದ ಕ್ರೀಡೆಯಲ್ಲಿ ಭಾಗವಹಿಸಬೇಕೆಂದರು.
ಪದವಿ ಪೂರ್ವ ಹಾಗೂ ವೃತ್ತಿ ಶಿಕ್ಷಣ ಇಲಾಖೆ ಕಾರವಾರ ಹಾಗೂ ಹಳಿಯಾಳದ ಶ್ರೀ ಶಿವಾಜಿ ಸರ್ಕಾರಿ ಪದವಿ ಪೂರ್ವ ವಿದ್ಯಾಲಯ ಹಳಿಯಾಳದವರ ಸಂಯುಕ್ತಾಶ್ರಯದಲ್ಲಿ ಪಟ್ಟಣದ ಶಿವಾಜಿ ಕ್ರೀಡಾಂಗಣದಲ್ಲಿ ನಡೆದ ಹಳಿಯಾಳ ತಾಲೂಕಾ ಮಟ್ಟದ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳ ಕ್ರೀಡಾಕೂಟದಲ್ಲಿ ವಿ.ಡಿ.ಹೆಗಡೆ ಪದವಿ ಪೂರ್ವ ಕಾಲೇಜು, ಕೆಎಲ್ಎಸ್, ಶಿವಾಜಿ ಸರಕಾರಿ ಪದವಿ ಪೂರ್ವ ಕಾಲೇಜು, ಸರಕಾರಿ ಪದವಿ ಪೂರ್ವ ಕಾಲೇಜು ಮುರ್ಕವಾಡ, ದಾಂಡೇಲಿಯ ಬಂಗೂರನಗರ ಪದವಿ ಪೂರ್ವ ಕಾಲೇಜು ಮತ್ತು ಜೋಯಿಡಾ ಸರಕಾರಿ ಪದವಿ ಪೂರ್ವ ಕಾಲೇಜಿನ 150ಕ್ಕೂ ಹೆಚ್ಚು ವಿದ್ಯಾರ್ಥಿಗಳು ಕ್ರೀಡಾಕೂಟದಲ್ಲಿ ಭಾಗವಿಸಿದ್ದಾರೆ.
ಕಾರ್ಯಕ್ರಮದಲ್ಲಿ ಶಿವಾಜಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಮಾನೆ, ಆಂಗ್ಲ ಉಪನ್ಯಾಸಕರಾದ ಸುಭ್ರಮಣ್ಯ ವಿ ಎಲ್ಲಾ ಶಾಲೆಗಳ ದೈಹಿಕ ಶಿಕ್ಷಕರು ಮೊದಲಾದವರು ಪಾಲ್ಗೊಂಡಿದ್ದರು.



Leave a Comment