• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಹಳಿಯಾಳ ತಹಶಿಲ್ದಾರ್ ವಿರುದ್ದ ಅನುಮತಿ ಇಲ್ಲದೇ ಪ್ರತಿಭಟನೆ ಕ್ರಮಕ್ಕೆ ಆಗ್ರಹಿಸಿದ ವಿವಿಧ ಸಂಘಟನೆಯವರು.

September 9, 2019 by Yogaraj SK Leave a Comment

submitted memorandum to AC ABHIJIN about Tahsildar gulguli

ಹಳಿಯಾಳ:- ಹಿರಿಯ ಅಧಿಕಾರಿಗಳ ಗಮನಕ್ಕೆ ತರದೆ, ಅವರ ಅನುಮತಿ ಪಡೆಯದೆ ಹಳಿಯಾಳ ತಹಶೀಲ್ದಾರ್‍ರ ವಿರುದ್ದ ತಹಶೀಲ್ದಾರ್ ಕಚೇರಿ ಸಿಬ್ಬಂದಿಗಳು ಹಾಗೂ ತಾಲೂಕಾ ನೌಕರರ ಸಂಘದವರ ಯಾರದೋ ಕುಮ್ಮಕ್ಕಿನಿಂದ ಇತ್ತೀಚೆಗೆ ನಡೆಸಿದ ಪ್ರತಿಭಟನೆ ಕುರಿತು ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ದ ಯೋಗ್ಯ ಕ್ರಮ ಕೈಗೊಳ್ಳುವಂತೆ ಹಳಿಯಾಳ ತಾಲುಕಾ ಕಬ್ಬು ಬೆಳೆಗಾರರ ಸಂಘದವರು ಹಾಗೂ ತೇರಗಾಂವ ಗ್ರಾಮಸ್ಥರು ಜಿಲ್ಲಾಧಿಕಾರಿಗಳಿಗೆ ಬರೆದ ಮನವಿ ಪತ್ರವನ್ನು ಎಸಿ ಅಭಿಜಿನ್ ಅವರಿಗೆ ಸಲ್ಲಿಸಿದರು.
ಶುಕ್ರವಾರ ತಹಶೀಲ್ದಾರ್ ಕಚೇರಿಗೆ ಆಗಮಿಸಿದ್ದ ಅಸಿಸ್ಟಂಟ್ ಕಮೀಷನರ್ ಅಭಿಜಿನ್ ಅವರನ್ನು ಭೇಟಿಯಾದ ತಾಲೂಕಿನ ತೇರಗಾಂವ ಗ್ರಾಮಸ್ಥರು, ರೈತರು, ವಿವಿಧ ಸಂಘಟನೆಯವರು ಹಾಗೂ ಕಬ್ಬು ಬೆಳೆಗಾರರ ಸಂಘದವರು ಜಿಲ್ಲಾಧಿಕಾರಿಗಳ ಹೆಸರಿನಲ್ಲಿದ್ದ ಮನವಿಯನ್ನು ಅವರಿಗೆ ಸಲ್ಲಿಸಿದರು.
ಮನವಿಯಲ್ಲಿ ತಹಶೀಲ್ದಾರ್ ವಿದ್ಯಾಧರ ಗುಳಗುಳಿ ಅವರು ಕಳೆದ 5 ವರ್ಷಗಳಿಂದ ಹಳಿಯಾಳ ತಹಶೀಲ್ದಾರ್ ಆಗಿ ಜನಸ್ನೇಹಿಯಾಗಿ ಪ್ರಾಮಾಣಿಕತೆಯಿಂದ ಪಾರದರ್ಶಕ ಆಡಳಿತ ನೀಡುತ್ತಾ ಬಡವರಿಗೆ, ರೈತರಿಗೆ ಸೇರಿದಂತೆ ಅರ್ಹರಿಗೆ ನ್ಯಾಯ ಒದಗಿಸಿಕೊಟ್ಟಿದ್ದು ಅಂತಹ ದಕ್ಷ ಅಧಿಕಾರಿಯ ವಿರುದ್ದ ಹಳಿಯಾಳ ತಹಶೀಲ್ದಾರ್ ಕಚೇರಿಯ ಸಿಬ್ಬಂದಿಗಳು ಹಾಗೂ ನೌಕರರ ಸಂಘದ ಅಧ್ಯಕ್ಷ ಪ್ರಶಾಂತ, ಸರ್ವೇ ಇಲಾಖೆ, ದಾಂಡೇಲಿ ತಹಶೀಲ್ದಾರ್ ಕಚೇರಿ ಸಿಬ್ಬಂದಿಗಳು ಹಠಾತ್ತನೆ ಅನಧಿಕೃತವಾಗಿ ಪ್ರತಿಭಟನೆ ನಡೆಸಿರುವುದು ವಿಷಾಧನೀಯ ಸಂಗತಿಯಾಗಿದ್ದು ಘಟನೆಯನ್ನು ಖಂಡಿಸುವುದಾಗಿ ಮನವಿಯಲ್ಲಿ ತಿಳಿಸಿದ್ದಾರೆ.
ಸಿಬ್ಬಂದಿಗಳು ಏಕಾಏಕಿ ಧರಣಿ ನಡೆಸಿದ್ದರಿಂದ ಹಳಿಯಾಳ ತಾಲೂಕಿಗೆ ಕಪ್ಪು ಚುಕ್ಕೆ ಬಂದಂತಾಗಿದೆ. ಕಂದಾಯ ನೀರಿಕ್ಷಕ ರಾಘವೇಂದ್ರ ಅವರು ಕೆಲಸದ ಒತ್ತಡದಿಂದ ತಪ್ಪಿಸಿಕೊಳ್ಳಲು ಈ ರೀತಿಯಾಗಿ ಬೆದರಿಕೆ ತಂತ್ರ ನಡೆಸಿದ್ದು. ವೈಯಕ್ತಿಕ ಸಮಸ್ಯೆಗಳನ್ನು ಕಚೇರಿ ವಿಷಯದಲ್ಲಿ ಎಳೆದು ತಂದಿದ್ದು ಸಾಕಷ್ಟು ಅನುಮಾನಗಳಿಗೆ ಎಡೆಮಾಡಿಕೊಡುತ್ತಿರುವ ಕಾರಣ ಕೂಡಲೇ ಈ ಘಟನೆ ಕುರಿತು ಸೂಕ್ತ ವಿಚಾರಣೆ ನಡೆಸಿ ತಪ್ಪಿತಸ್ಥರ ವಿರುದ್ದ ಕ್ರಮ ಕೈಗೊಳ್ಳಬೇಕು ಹಾಗೂ ತಾಲೂಕಿನ ಸಾರ್ವಜನೀಕರಿಗೆ ಸುಗಮವಾಗಿ ಆಡಳಿತ ನಡೆಸಲು ಅನುವು ಮಾಡಿಕೊಡಬೇಕೆಂದು ಮನವಿಯಲ್ಲಿ ಬೇಡಿಕೊಂಡಿದ್ದಾರೆ.
ಈ ಸಂದರ್ಭದಲ್ಲಿ ಕಬ್ಬು ಬೆಳೆಗಾರ ಸಂಘದ ಅಧ್ಯಕ್ಷ ಶಂಕರ ಕಾಜಗಾರ, ಕಾಮಧೆನು ಸೇವಾ ಸಹಕಾರಿ ಸಂಘದ ಡಿಜೆ ಮಿರಾಶಿ, ಪ್ರಮುಖರಾದ ಸುರೇಶ ಶಿವನ್ನವರ, ಪರಶುರಾಮ ಹೊಂಡದಕಟ್ಟಿ, ಮಾಹಿರಲಿ ಪುಂಗಿ, ಪುಂಡಲಿಕ ಶಿಂಧೆ, ಜಯ ಕರ್ನಾಟಕ ಸಂಘಟನೆಯ ವಿಲಾಸ ಕಣಗಲಿ, ಶಿರಾಜ ಮುನವಳ್ಳಿ, ನೇಮು ದುಗ್ಗಾಣಿ, ಭರತ, ಅಭಿಲಾಷ ಮೊದಲಾವರು ಇದ್ದರು.

Table of Contents

Toggle
  • Share this:
  • Related News:

Share this:

  • Share on WhatsApp (Opens in new window) WhatsApp
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Email a link to a friend (Opens in new window) Email
  • Print (Opens in new window) Print

Related News:

Filed Under: Canara News, Haliyal News Tagged With: ಅಸಿಸ್ಟಂಟ್ ಕಮೀಷನರ್ ಅಭಿಜಿನ್, ಕ್ರಮಕ್ಕೆ ಆಗ್ರಹಿಸಿದ, ತಾಲೂಕಾ ನೌಕರರ ಸಂಘ, ದಾಂಡೇಲಿ ತಹಶೀಲ್ದಾರ್ ಕಚೇರಿ ಸಿಬ್ಬಂದಿಗಳು ಹಠಾತ್ತನೆ ಅನಧಿಕೃತ, ನೌಕರರ ಸಂಘದ ಅಧ್ಯಕ್ಷ ಪ್ರಶಾಂತ, ವಿವಿಧ ಸಂಘಟನೆಯವರು, ಶುಕ್ರವಾರ ತಹಶೀಲ್ದಾರ್ ಕಚೇರಿಗೆ, ಸರ್ವೇ ಇಲಾಖೆ, ಹಳಿಯಾಳ ತಹಶಿಲ್ದಾರ್ ವಿರುದ್ದ ಅನುಮತಿ ಇಲ್ಲದೇ ಪ್ರತಿಭಟನೆ

Explore More:

About Yogaraj SK

Yograj typically covers local news from Haliyal

Subscribe to News from Yogaraj

Reader Interactions

Leave a CommentCancel reply

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,217,060 visitors

Footer

ಕರ್ನಾಟಕ ಟೂರಿಸಂ ಅವಾರ್ಡ್ಸ್: ಉತ್ತರ ಕನ್ನಡ ಜಿಲ್ಲೆಯ ನಾಲ್ಕು ಸಂಸ್ಥೆಗಳಿಗೆ ಐದು ಪ್ರಶಸ್ತಿ

September 29, 2026 By Sachin Hegde

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar

Loading Comments...