
ಜೋಯಿಡಾ ತಾಲೂಕಿನ ಪ್ರಾಥಮಿಕ ಶಾಲಾ ಮಕ್ಕಳ ತಾಲೂಕಾ ಮಟ್ಟದ ಕ್ರೀಡಾಕೂಟವು ಜೋಯಿಡಾದ ಕ್ರೀಡಾಂಗಣದಲ್ಲಿ ನಡೆಯಿತು.
ತಾ.ಪಂ. ಅಧ್ಯಕ್ಷೆ ನರ್ಮದಾ ಪಾಟ್ನೇಕರ ಕ್ರೀಡಾಕೂಟವನ್ನು ಉದ್ಘಾಟಿಸಿ ಕ್ರೀಡಾಕೂಟಕ್ಕೆ ಚಾಲನೆ ನೀಡಿದರು.
ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಎಸ್,ಹಿರೇಮಠ ಮಾತನಾಡಿ ಮಕ್ಕಳ ಭವಿಷ್ಯ ರೂಪಿಸುವ ಮೊದಲ ಹಂತ ತಾಲೂಕಾ ಮಟ್ಟದ ಕ್ರೀಡಾಕೂಟ, ಮಕ್ಕಳು ವಿದ್ಯಾಬ್ಯಾಸದ ಜೊತೆಗೆ ಕ್ರೀಡೆಯಲ್ಲೂ ಆಸಕ್ತಿಯನ್ನು ತೋರಬೇಕು ಎಂದರು.
ಈ ಸಂದರ್ಭದಲ್ಲಿ ಜಿ,ಪ.ಂ.ಸದಸ್ಯ ರಮೇಶ ನಾಯ್ಕ, ಜೋಯಿಡಾ ಗ್ರಾ.ಪಂ. ಅಧ್ಯಕ್ಷೆ ಶೈಲಾ ನಾಯ್ಕ ,ಉಪಾಧ್ಯಕ್ಷ ಶ್ಯಾಮ ಪೊಕಳೆ, ಸದಸ್ಯ ಸಂತೋಷ ಮಂಥೇರೋ ಉಪಸ್ಥಿತರಿದ್ದರು.
Leave a Comment