ಧಾರವಾಡ :– ಕಳೆದ ವಾರವಷ್ಟೆ ಹುಬ್ಬಳ್ಳಿಯಲ್ಲಿ ಬಿಹಾರ್ ಮೂಲದ ವ್ಯಕ್ತಿಯೊಬ್ಬನ ಮೇಲೆ ನಡೆದ ಶೂಟೌಟ್ ಪ್ರಕರಣ ಮಾಸುವ ಮುನ್ನವೇ ಧಾರವಾಡದಲ್ಲಿ ಇಂದು ಬೆಳಗ್ಗೆ ನಡುರಸ್ತೆಯಲ್ಲೇ ಗುಂಡಿಟ್ಟು ವ್ಯಕ್ತಿಯೊಬ್ಬನನ್ನು ಹತ್ಯೆ ಮಾಡಿರುವ ಘಟನೆ ಧಾರವಾಡ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು ವಿದ್ಯಾಕಾಶಿ ಬೆಚ್ಚಿ ಬಿದ್ದಿದೆ.
ಉತ್ತರ ಕನ್ನಡದ ದಾಂಡೇಲಿ ಮೂಲದ ಶ್ಯಾಂ ಸುಂದರ್ ಮುತಕುಡಿ (40) ದುಷ್ಕರ್ಮಿಗಳ ಗುಂಡೇಟಿಗೆ ಬಲಿಯಾದ ವ್ಯಕ್ತಿ.
ಧಾರವಾಡ ಹೊರವಲಯದ ಹಳಿಯಾಳ ರಸ್ತೆಯಲ್ಲಿರುವ ಹೊಯ್ಸಳ ನಗರದ ತಪೋವನ ಬಳಿ ಇಂದು ಬೆಳಗ್ಗೆ 10 ಗಂಟೆಗೆ ಕಾರಿನಲ್ಲಿ ಬರುತ್ತಿದ್ದ ದಾಂಡೇಲಿಯ ಶ್ಯಾಂ ಸುಂದರನ್ನು ಬೈಕ್ನಲ್ಲಿ ಹಿಂಬಾಲಿಸಿ ಬಂದ ಮೂವರು ಗುಂಡು ಹಾರಿಸಿ ಪರಾರಿಯಾಗಿದ್ದಾರೆ.


Leave a Comment