• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಸಂಚಾರಿ ನಿಯಮಗಳ ಜಾಗೃತಿ ಕಾರ್ಯಕ್ರಮ

September 30, 2019 by Gaju Gokarna Leave a Comment

watermarked hnr 30 paperp news sdm c.

ಹೊನ್ನಾವರ ,ಎಸ್.ಡಿ.ಎಂ. ಪ್ರಥಮ ದರ್ಜೆ ಮಹಾವಿದ್ಯಾಲಯ, ರೋಟರಿ ಸಂಸ್ಥೆ ಹೊನ್ನಾವರ ಮತ್ತು ಕಾಲೇಜಿನ ರೋಟ್ರ್ಯಾಕ್ಟ್ ಸಂಘಗಳ ಸಹಯೋಗದಲ್ಲಿ ಪ್ರಸ್ತುತ ಸಂಚಾರಿ ನಿಯಮಗಳ ಜಾಗೃತಿ ಕಾರ್ಯಕ್ರಮವನ್ನು ಆಯೋಜಿಸಲಾಯಿತು.
ಹೊನ್ನಾವರದ ಆರ್.ಟಿ.ಓ. ವಾಸೀಂ ಬಾಬಾ ಮಾತನಾಡಿ ಮೋಟಾರು ವಾಹನ ಚಾಲನೆಯನ್ನು ಮಾಡುವವರು ಅನುಸರಿಸಬೇಕಾದ ನಿಯಮಗಳನ್ನು ಪ್ರಾತ್ಯಕ್ಷಿಕೆ ಮೂಲಕವಾಗಿ ವಿದ್ಯಾರ್ಥಿಗಳಿಗೆ ಮನವರಿಕೆ ಮಾಡಿಕೊಟ್ಟರು. ಕೇಂದ್ರ ಸರಕಾರ ಹೊಸದಾಗಿ ತಿದ್ದುಪಡಿ ಮಾಡಿ ಜಾರಿಗೆ ತಂದಿರುವ ಮೋಟಾರು ವಾಹನ ಕಾನೂನುಗಳನ್ನು ಉಲ್ಲಂಘಿಸುವುದರಿಂದ ಮೋಟಾರು ವಾಹನ ಚಾಲಕರಿಗೆ ಮತ್ತು ಸಾರ್ವಜನಿಕರಿಗೆ ಆಗುವ ತೊಂದರೆಗಳನ್ನು ವಿವರವಾಗಿ ತಿಳಿಸಿದರು.
ನ್ಯಾಯವಾದಿ ಉದಯ ಡಿ. ನಾಯ್ಕ ಮಾತನಾಡಿ ಮೋಟಾರು ವಾಹನ ಕಾನೂನಿಗೆ ಹೊಸದಾಗಿ ಕೇಂದ್ರ ಸರಕಾರ ಹಲವಾರು ತಿದ್ದುಪಡಿಗಳನ್ನು ಮಾಡಿ ಕಾನೂನನ್ನು ಉಲ್ಲಂಘಿಸುವವರಿಗೆ ದೊಡ್ಡ ಪ್ರಮಾಣದ ದಂಡವನ್ನು ವಿಧಿಸುವಂತೆ ತಿಳಿಸಿದೆ. ಇದು ರಾಷ್ಟ್ರಾದ್ಯಂತ ಜಾರಿಯಲ್ಲಿದ್ದು, ಕೆಲವು ರಾಜ್ಯ ಸರಕಾರಗಳು ದೊಡ್ಡ ಪ್ರಮಾಣದ ದಂಡದಿಂದ ಸ್ವಲ್ಪ ಪ್ರಮಾಣದ ಪರೀಷ್ಕರಣೆಯನ್ನು ಮಾಡಿದೆ. ವಾಹನ ಚಾಲನೆಯನ್ನು ಮಾಡುವವರು ಯಾವ ಯಾವ ದಾಖಲೆಗಳನ್ನು ತಮ್ಮ ಜೊತೆಯಲ್ಲಿಯೇ ಹೊಂದಿರಬೇಕು ಹೇಗೆ ರಸ್ತೆ ನಿಯಮಗಳನ್ನು ಪಾಲಿಸಬೇಕು ಎನ್ನವುದನ್ನು ತಮ್ಮ ಉಪನ್ಯಾಸದಲ್ಲಿ ತಿಳಿಸಿ ಅಗತ್ಯವಿರುವ ದಾಖಲೆಗಳನ್ನು ಹೊಂದದಿರುವುದರಿಂದ ಯಾವ ಯಾವ ರೀತಿಯ ತೊಂದರೆಯನ್ನು ಅನುಭವಿಸಬೇಕಾಗುತ್ತದೆ ಮತ್ತು ಯಾವುದಕ್ಕೆ ಎಷ್ಟು ದಂಡವನ್ನು ನೀಡಬೇಕಾಗುತ್ತದೆ ಎಂಬುದನ್ನು ವಿವರವಾಗಿ ಕಾನೂನಿನ ಪರಭಾಷೆಯಲ್ಲಿ ಅರ್ಥಪೂರ್ಣವಾಗಿ ಮನವರಿಕೆ ಮಾಡಿಕೊಟ್ಟರು.

IMG 20190926 WA0133


ಯೂನಿಯನ್ ಉಪಾಧ್ಯಕ್ಷರಾದ ಡಾ. ಎಂ. ಆರ್. ನಾಯಕ ಮಾತನಾಡಿ ನಮ್ಮ ದೇಶದಲ್ಲಿ ಶಾಸನದ ಪ್ರಭುತ್ವವಿದ್ದು, ಸರ್ವರ ಹಿತಕ್ಕಾಗಿ ಶಾಸನವನ್ನು ಪಾಲಿಸಬೇಕಾಗಿರುವುದು ಪ್ರತಿಯೊಬ್ಬ ನಾಗರಿಕನ ಮೂಲಭೂತ ಕರ್ತವ್ಯವಾಗಿದೆ ಕಾನೂನು ಮತ್ತು ನಿಯಮಗಳನ್ನು ಉಲ್ಲಂಘಿಸುತ್ತಿರುವ ಜನರನ್ನು ವಿಶೇಷವಾಗಿ ಯುವಜನರನ್ನು ಜಾಗೃತಿಗೊಳಿಸುವುದಕ್ಕಾಗಿ ದೊಡ್ಡ ಪ್ರಮಾಣದ ದಂಡವನ್ನು ವಿಧಿಸುವ ಮೂಲಕ ಹೊಸ ಮೋಟಾರು ವಾಹನ ಕಾನೂನಿಗೆ ತಿದ್ದುಪಡಿಯನ್ನು ತಂದಿದೆ. ಸಾರ್ವಜನಿಕ ಆಸ್ತಿ ಪಾಸ್ತಿಗೆ ಸಾರ್ವಜನಿಕರಿಗೆ ಮತ್ತು ನಿರಪರಾಧಿಗಳಿಗೆ ಪ್ರಾಣ ಹಾನಿ ಮತ್ತು ತೊಂದರೆಯಾಗುವುದನ್ನು ತಪ್ಪಿಸುವುದಕ್ಕಾಗಿ ಪ್ರತಿಯೊಬ್ಬ ನಾಗರಕರೂ ಸಂಚಾರಿ ನಿಯಮಗಳನ್ನು ಪಾಲನೆ ಮಾಡಬೇಕಾದ ಹೊಣೆಗಾರಿಕೆ ಬದ್ಧರಾಗರಬೇಕು ಎಂದರು ,
. ಪ್ರಾಚಾರ್ಯರಾದ ಡಾ. ವಿಜಯಲಕ್ಷ್ಮಿ ನಾಯ್ಕ ಅಧ್ಯಕ್ಷತೆಯನ್ನು ವಹಿಸಿದ್ದರು.
ರೋಟ್ರ್ಯಾಕ್ಟ್ ಸಂಚಾಲಕರಾದ ಪ್ರೊ. ಹರಿದಾಸ ಅರ್ವಾರೆ, ರೋಟರಿ ಸಂಸ್ಥೆಯ ಅಧ್ಯಕ್ಷರಾದ ದಿನೇಶ ಕಾಮತ್ . ಎಂ.ಪಿ.ಇ. ಸೊಸೈಟಯ ಕಾರ್ಯದರ್ಶಿಗಳಾದ ಎಸ್.ಎಂ. ಭಟ್ಟ ಹಾಗೂ ವಿದ್ಯಾರ್ಥಿ ಒಕ್ಕೂಟದ ಕಾರ್ಯದರ್ಶಿಗಳು ವೇದಿಕೆಯಲ್ಲಿ ಉಪಸ್ಥಿತರಿದ್ದರು.

IMG 20190926 WA0134

Table of Contents

Toggle
  • Share this:
  • Related News:

Share this:

  • Share on WhatsApp (Opens in new window) WhatsApp
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Email a link to a friend (Opens in new window) Email
  • Print (Opens in new window) Print

Related News:

Filed Under: Canara News, Honavar News, Other Tagged With: ಎಸ್.ಡಿ.ಎಂ. ಪ್ರಥಮ ದರ್ಜೆ ಮಹಾವಿದ್ಯಾಲಯ, ಕಾಲೇಜಿನ ರೋಟ್ರ್ಯಾಕ್ಟ್ ಸಂಘಗಳ ಸಹಯೋಗ, ಮೋಟಾರು ವಾಹನ ಚಾಲನೆ, ರೋಟರಿ ಸಂಸ್ಥೆ ಹೊನ್ನಾವರ, ಶಾಸನದ ಪ್ರಭುತ್ವ, ಸಂಚಾರಿ ನಿಯಮಗಳ ಜಾಗೃತಿ ಕಾರ್ಯಕ್ರಮ, ಸಾರ್ವಜನಿಕರಿಗೆ ಆಗುವ ತೊಂದರೆ, ಹೊಸದಾಗಿ ಕೇಂದ್ರ ಸರಕಾರ ಹಲವಾರು ತಿದ್ದುಪಡಿ

Explore More:

Reader Interactions

Leave a CommentCancel reply

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,217,055 visitors

Footer

ಕರ್ನಾಟಕ ಟೂರಿಸಂ ಅವಾರ್ಡ್ಸ್: ಉತ್ತರ ಕನ್ನಡ ಜಿಲ್ಲೆಯ ನಾಲ್ಕು ಸಂಸ್ಥೆಗಳಿಗೆ ಐದು ಪ್ರಶಸ್ತಿ

September 29, 2026 By Sachin Hegde

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar

Loading Comments...