
ಹಳಿಯಾಳ:- ಶಿರಸಿ ಶೈಕ್ಷಣಿಕ ಜಿಲ್ಲೆಯ ಜಿಲ್ಲಾ ಮಟ್ಟದ ವಿಜ್ಞಾನ ವಸ್ತು ಪ್ರದರ್ಶನ 2019-20ರಲ್ಲಿ ಹಳಿಯಾಳದ ಸೈಂಟ್ ಮಿಲಾಗ್ರಿಸ್ ಪ್ರೌಢಶಾಲೆಯ ಪ್ರತಿಭಾನ್ವಿತ ವಿದ್ಯಾರ್ಥಿ ಪ್ರಥ್ವಿ ಸಂಜಯ ಪಾಟೀಲ್ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾನೆ.
ಸಾರ್ವಜನೀಕ ಶಿಕ್ಷಣ ಇಲಾಖೆ, ಆಯುಕ್ತರ ಕಚೇರಿ, ಪ್ರೌಢಶಿಕ್ಷಣ ನಿರ್ದೇಶನಾಲಯ ಬೆಂಗಳೂರು, ಎನ್.ಸಿ.ಇ.ಆರ್.ಟಿ, ವಿಐಟಿಎಂ ಮತ್ತು ಡಿಎಸ್ಇಆರ್ಟಿ ಹಾಗೂ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ ಶಿರಸಿ, ಶೈಕ್ಷಣಿಕ ಜಿಲ್ಲೆ ಶಿರಸಿ ಇವರ ಸಂಯುಕ್ತ ಆಶ್ರಯದಲ್ಲಿ ಶಿರಸಿಯ ನಿಲೇಕಣಿಯ ಸಿಜಿಎಚ್ಎಸ್ ಪ್ರೌಢಶಾಲೆಯಲ್ಲಿ ನಡೆದ ಶಿರಸಿ ಶೈಕ್ಷಣಿಕ ಜಿಲ್ಲೆಯ ಜಿಲ್ಲಾ ಮಟ್ಟದ ವಿಜ್ಞಾನ ವಸ್ತು ಪ್ರದರ್ಶನ 2019-20ರಲ್ಲಿ ಹಳಿಯಾಳದ ಸೈಂಟ್ ಮಿಲಾಗ್ರಿಸ್ ಪ್ರೌಢಶಾಲೆಯ ಪ್ರತಿಭಾನ್ವಿತ ವಿದ್ಯಾರ್ಥಿ ಪ್ರಥ್ವಿ ಸಂಜಯ ಪಾಟೀಲ್ “ಕೈಗಾರಿಕಾ ಅಭಿವೃದ್ದಿ” ವಿಜ್ಞಾನ ವಸ್ತು ಪ್ರದರ್ಶನದಲ್ಲಿ ಜಿಲ್ಲಾ ಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾನೆ.
Leave a Comment