
ಹಳಿಯಾಳ:- ನವೆಂಬರ್ 1 ಕನ್ನಡ ರಾಜ್ಯೋತ್ಸವ ದಿನದ ಒಳಗಾಗಿ ತಾಲೂಕಿನ ಎಲ್ಲಾ ಸರ್ಕಾರಿ ಮತ್ತು ಸರ್ಕಾರೇತರ ಸಂಘ-ಸಂಸ್ಥೆಗಳ,ಎಲ್ಲಾ ಅಂಗಡಿ-ಮಳಿಗೆಗಳು ಕನ್ನಡದಲ್ಲೇ ನಾಮಫಲಕಗನ್ನು ಅಳವಡಿಸಬೇಕೆಂದು ಹಳಿಯಾಳದ ಜಯ ಕರ್ನಾಟಕ ಸಂಘಟನೆ ತಾಲೂಕಾಡಳಿತಕ್ಕೆ ಮನವಿ ಸಲ್ಲಿಸುವ ಮೂಲಕ ಆಗ್ರಹಿಸಿದೆ.
ಶುಕ್ರವಾರ ಪ್ರತಿಭಟನಾ ಮೇರವಣಿಗೆ ಮೂಲಕ ಇಲ್ಲಿಯ ತಹಶೀಲ್ದಾರ್ ಕಚೇರಿಗೆ ಆಗಮಿಸಿದ ಸಂಘಟನೆಯವರು ತಹಶೀಲ್ದಾರ್ ಅವರಿಗೆ ಬಳಿಕ ಪುರಸಭೆ ಮುಖ್ಯಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.

ಮನವಿಯಲ್ಲಿ ಉತ್ತರ ಕನ್ನಡ ಜಿಲ್ಲೆಯು ಗಡಿ ಜಿಲ್ಲೆಯಾಗಿದ್ದು ಇಲ್ಲಿ ಕನ್ನಡ ನಿರ್ಲಕ್ಷಕ್ಕೆ ಒಳಗಾಗುತ್ತಿದ್ದು ಕನ್ನಡವನ್ನು ಗಟ್ಟಿಗೊಳಿಸುವ ನಿಟ್ಟಿನಲ್ಲಿ ಅವಶ್ಯಕ ಕ್ರಮಗಳನ್ನು ತೆಗೆದುಕೊಳ್ಳುವ ಅವಶ್ಯಕತೆ ಕಂಡು ಬರುತ್ತಿದೆ. ಇದರ ಒಂದು ಕ್ರಮವಾಗಿ ಎಲ್ಲಾ ಸರ್ಕಾರಿ ಮತ್ತು ಸರ್ಕಾರೇತರ ಸಂಘ ಸಂಸ್ಥೆಗಳ ಮತ್ತು ಹಳಿಯಾಳ ಪಟ್ಟಣದ ಎಲ್ಲಾ ಅಂಗಡಿ,ಮಳಿಗೆಗಳು ಕನಿಷ್ಠ 60% ಕನ್ನಡದಲ್ಲೇ ಇರುವಂತೆ ನಾಮಫಲಕಗನ್ನು ಕಡ್ಡಾಯವಾಗಿ ಅಳವಡಿಸಬೇಕು.

ನವಂಬರ 1ರ ಒಳಗಾಗಿ ಕನ್ನಡದಲ್ಲೇ ನಾಮಫಲಕಗಳನ್ನು ಅಳವಡಿಸುವಂತೆ ಸಂಬಂಧಪಟ್ಟ ಇಲಾಖೆಯವರು ಆದೇಶಿಸಿ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಜಯ ಕರ್ನಾಟಕ ಸಂಘಟನೆಯವರು ಒತ್ತಾಯಿಸಿದ್ದಾರೆ.
ಮನವಿ ಸಲ್ಲಿಸುವಾಗ ಸಂಘಟನೆಯ ಘಟ್ಟದ ಮೇಲಿನ ಜಿಲ್ಲಾಧ್ಯಕ್ಷ ವಿಲಾಸ ಕಣಗಲಿ, ತಾಲೂಕಾಧ್ಯಕ್ಷ ಶಿರಾಜ ಮುನವಳ್ಳಿ, ಪ್ರಮುಖರಾದ ವಿನೋದ ಗಿಂಡೆ, ಜ್ಯೋತಿಬಾ, ಗಣೇಶ ಗೋಸಪ್ಪನವರ, ಸಿಕಂದರ ಮುಲ್ಲಾ ಇದ್ದರು.
Leave a Comment