
ಹೊನ್ನಾವರ –
ಭಟ್ಕಳ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿನ ವಸತಿ ಯೋಜನೆಯಲ್ಲಿ ಯಾವುದೇ ಸಮಸ್ಯೆ ಬಂದಲ್ಲಿ ತಮ್ಮ ಗಮನಕ್ಕೆ ತರುವಂತೆ ಶಾಸಕ ಸುನಿಲ್ ನಾಯ್ಕ ಪಂಚಾಯತ ಅಭಿವೃದ್ಧಿ ಅಧಿಕಾರಿಗಳಿಗೆ ಸೂಚಿಸಿದರು.
ಅವರು ಗುರುವಾರ ತಾಲೂಕಾಪಂಚಾಯತ ಸಭಾಂಗಣದಲ್ಲಿ ವಸತಿ ಯೋಜನೆಯ ಸಮಸ್ಯೆಗಳ ಬಗ್ಗೆ ಅಧಿಕಾರಿಗಳೊಂದಿಗೆ ಚಿಂತನ ಮಂಥನ ಸಭೆ ನಡೆಸಿ ಮಾತನಾಡಿದರು. ಸರ್ಕಾರ ಜನಪರವಾದ ಕೆಲಸ ಮಾಡುತ್ತಿದ್ದು ನಾನೂ ಜನರ ಸಮಸ್ಯೆಗಳಿಗೆ ಸ್ಪಂದಿಸಲು ಸದಾ ಪ್ರಯತ್ನಿಸುತ್ತೇನೆ, ಬಡ ಜನರಿಗೆ ನೀಡುವ ಸವಲತ್ತು ಪೂರೈಸುವುದು ನಮ್ಮ ಕರ್ತವ್ಯವಾಗಿದೆ ಪಂಚಾಯತ ಹಂತದಲ್ಲಿ ಬರುವ ಯಾವುದೇ ಸಮಸ್ಯೆಗಳ ನಿರ್ವಹಣೆ ಪಂಚಾಯತ ಅಭಿವೃದ್ಧಿ ಅಧಿಕಾರಿಗಳ ಕೆಲಸವಾಗಿರುತ್ತದೆ ಎನ್ನುವುದನ್ನು ನೆನಪಿಸಿದರು. ವೇದಿಕೆಯಲ್ಲಿ ತಾಲೂಕಾಪಂಚಾಯತ ಕಾರ್ಯನಿರ್ವಹಣಾಧಿಕಾರಿ ಸುರೇಶ ನಾಯ್ಕ ಉಪಸ್ಥಿತರಿದ್ದರು ಪಂಚಾಯತ ಅಭಿವೃದ್ಧಿ ಅಧಿಕಾರಿಗಳು ಉಪಸ್ಥಿತರಿದ್ದರು.



Leave a Comment