
ರಾಜ್ಯದಲ್ಲಿ ಬಿಜೆಪಿ ಜಯಭೇರಿ ಹೊನ್ನಾವರದ ಶರಾವತಿ ವೃತ್ತದಲ್ಲಿ ಕಾರ್ಯಕರ್ತರಿಂದ ಪಟಾಕಿ ಸಿಡಿಸಿ ಸಿಹಿ ಹಂಚಿ ಸಂಭ್ರಮ
ರಾಜ್ಯದಲ್ಲಿ ನಡೆದ ಉಪಚುನಾವಣೆಯಲ್ಲಿ 12 ಸ್ಥಾನವನ್ನು ಗೆಲ್ಲುವ ಮೂಲಕ ಸರ್ಕಾರ ಸುಭದ್ರವಾದ ಹಿನ್ನಲೆಯಲ್ಲಿ ಹಾಗೂ ಜಿಲ್ಲೆಯ ಯಲ್ಲಾಪುರದಲ್ಲಿ ಶಿವರಾಮ ಹೆಬ್ಬಾರ 30 ಸಾವಿರಕ್ಕೂ ಅಧಿಕ ಮತಗಳಿಂದ ಗೆಲುವು ಸಾಧಿಸಿದಕ್ಕೆ ತಾಲೂಕಿನ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಶರಾವತಿ ವೃತ್ತದ ಪಟಾಕಿ ಸಿಡಿಸಿ ಸಂಭ್ರಮ ಆಚರಿಸಿದರು.
ಈ ಸಂದರ್ಭದಲ್ಲಿ ಮುಖಂಡರಾದ ರಾಜು ಭಂಡಾರಿ, ಗಣಪತಿ ನಾಯ್ಕ (ಬಿಟಿ), ಲೋಕೇಶ ಮೇಸ್ತ, ಟಿಎಸ್.ಹೆಗಡೆ, ಎಂ.ಎಸ್.ಹೆಗಡೆ ಕಣ್ಣಿ, ಸುರೇಶ ಖಾರ್ವಿ, ಸದಾನಂದ ಭಟ್, ಪರಮೇಶ್ವರ ನಾಯ್ಕ, ದತ್ತಾತ್ರೇಯ ಮೇಸ್ತ, ಮತ್ತು ಪಟ್ಟಣ ಪಂಚಾಯತ ಸದಸ್ಯರು ಕಾರ್ಯಕರ್ತರು ಉಪಸ್ಥಿತರಿದ್ದರು.
Leave a Comment