
ಹಳಿಯಾಳ;- ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ವಿದ್ಯಾರ್ಥಿಗಳು ಉತ್ತಮ ಜ್ಞಾನ, ಮತ್ತು ಕೌಶಲ್ಯವನ್ನು ಸಂಪಾದಿಸುವುದು ಅತಿ ಅವಶ್ಯಕವಾಗಿದೆ ಎಂದು ವಿ.ಆರ್.ಡಿ.ಎಮ್ ಟ್ರಸ್ಟ್ ಧರ್ಮದರ್ಶಿ ರಾಧಾಬಾಯಿ ಆರ್.ದೇಶಪಾಂಡೆ ಹೇಳಿದರು.
ತಾಲೂಕಿನ ಕೆಕೆ ಹಳ್ಳಿಯ ಶ್ರೀ ಗುರು ನಿತ್ಯಾನಂದ ಆಶ್ರಮದಲ್ಲಿ ನಡೆದ ವಿ.ಆರ್.ದೇಶಪಾಂಡೆ ಮೆಮೋರಿಯಲ್ ಟ್ರಸ್ಟ್ 2018-19 ನೇ ಸಾಲಿನ ಎಸ್.ಎಸ್.ಎಲ್.ಸಿ 87 ಪಿ.ಯು.ಸಿ.ಯ 19 ವಿದ್ಯಾರ್ಥಿಗಳು ಸೇರಿದಂತೆ ಒಟ್ಟೂ 106 ವಿದ್ಯಾರ್ಥಿಗಳಿಗೆ 62,500/ – ರೂ.ಗಳ ವಿದ್ಯಾರ್ಥಿ ವೇತನ ವಿತರಣಾ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ವಿತರಿಸಿ ಮಾತನಾಡಿದರು. ವಿದ್ಯಾರ್ಥಿಗಳು ಪಡೆದ ಶಿಷ್ಯವೇತನದ ಸದುಪಯೋಗಪಡಿಸಿಕೊಳ್ಳಬೇಕು ಎಂದು ಕರೆ ನೀಡಿದರು.
ಕಾರ್ಯಕ್ರಮಕ್ಕೆ ಉಪಸ್ಥಿತರಿದ್ದ ಗುರು ನಿತ್ಯಾನಂದ ಆಶ್ರಮದ ಬಾಬು ಸ್ವಾಮೀಜಿಯವರು ಮಾತನಾಡಿ ವಿ.ಆರ್.ದೇಶಪಾಂಡೆ ಮೆಮೋರಿಯಲ್ ಟ್ರಸ್ಟ್ ಯಾವುದೇ ಜಾತಿ ಮತ ಪಂಥಗಳನ್ನು ಗಣನೆಗೆ ತೆಗೆದುಕೊಳ್ಳದೆ ಪ್ರತಿಭಾವಂತ ವಿದ್ಯಾರ್ಥಿಗಳ ಜ್ಞಾನವನ್ನು ಪರಿಗಣಿಸಿ ಅವರ ವಿದ್ಯಾಬ್ಯಾಸಕ್ಕೆ ಸಹಾಯ- ಸಹಕಾರ ನೀಡುತ್ತಿರುವುದು ಶ್ಲಾಘನೀಯ ಎಂದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ ಸದಸ್ಯೆ ಮಹೇಶ್ವರಿ ಎಸ್. ಮಿಶ್ಯಾಳಿ, ಮುರ್ಕವಾಡ ಗ್ರಾಮ ಪಂಚಾಯತ ಅಧ್ಯಕ್ಷ ಮಾರುತಿ ಕಮ್ಮಾರ, ವಿ.ಆರ್.ಡಿ.ಎಮ್ ಟ್ರಸ್ಟ್ ವ್ಯವಸ್ಥಾಪಕರಾದ ವಿವೇಕ ಹೆಗಡೆ, ಪ್ರಮುಖರಾದ ಗುರುನಾಥ ಇನಾಮದಾರ, ಕೆನರಾಬ್ಯಾಂಕ ದೇಶಪಾಂಡೆ ಆರ್ಸೆಟಿಯ ಉಳವಯ್ಯಾ ಬೆಂಡಿಗೇರಿ ಇದ್ದರು.

Leave a Comment