ಹಳಿಯಾಳ:- ಕರ್ನಾಟಕದ ಕಾರವಾರ ಹಾಗೂ ಜೋಯಿಡಾ ತಾಲೂಕುಗಳನ್ನು ಗೋವಾಗೆ ಸೇರಿಸಬೇಕು ಎಂದು ಕೊಂಕಣಿ ಮಂಚ್ ಆಗ್ರಹಿಸುತ್ತಿರುವುದು ಅಪ್ರಸ್ತುತ ಹಾಗೂ ಅಸಮಂಜಸವಾಗಿದೆ ಎಂದು ಹಳಿಯಾಳ-ಜೋಯಿಡಾ ವಿಧಾನ ಸಭಾ ಕ್ಷೇತ್ರ ಶಾಸಕ ಆರ್.ವಿ.ದೇಶಪಾಂಡೆ ಹೇಳಿದ್ದಾರೆ.
ಈ ಕುರಿತು ಹೇಳಿಕೆ ನೀಡಿರುವ ಶಾಸಕರು ಈ ಭಾಗದಲ್ಲಿ ವಾಸಿಸುತ್ತಿರುವ ಜನರು ಅತ್ಯಂತ ಶಾಂತಿ, ಸಹಬಾಳ್ವೆ ಹಾಗೂ ಸಹೋದರತ್ವ, ಭಾತೃತ್ವ ಭಾವನೆಯಿಂದ ಜೀವನ ಸಾಗಿಸುತ್ತಿದ್ದಾರೆ. ಜೊತೆಗೆ ಕರ್ನಾಟಕ ರಾಜ್ಯ ಸರ್ಕಾರದ ಸೌಲಭ್ಯಗಳನ್ನು ಪಡೆದು ಸಂತೋಷ ಹಾಗೂ ನೆಮ್ಮದಿಯಿಂದ ಜೀವನ ನಡೆಸುತ್ತಿದ್ದಾರೆ.
ಇಂಥ ಸಂಧಂರ್ಭದಲ್ಲಿ ಕೊಂಕಣಿ ಭಾಷಿಕರಿರುವ ಕಾರವಾರ ಹಾಗೂ ಜೋಯಿಡಾ ತಾಲೂಕುಗಳನ್ನು ಗೋವಾಗೆ ಸೇರಿಸಬೇಕು ಎಂದು ಒತ್ತಾಯಿಸುತ್ತಿರುವುದು ಅಸಮಂಜಸವಾಗಿದೆ ಎಂದು ಹೇಳಿರುವ ದೇಶಪಾಂಡೆ ಕೊಂಕಣಿ ಮಂಚ್ ಇಂತಹ ಅಪ್ರಸ್ತುತ ಹೇಳಿಕೆಗಳನ್ನು ನೀಡುವ ಮೊದಲು ಯೋಚಿಸಲಿ ಎಂದು ಸಲಹೆ ನೀಡಿದ್ದಾರೆ.

Leave a Comment