ಕಾರವಾರ:- ಗುರುವಾರ ವಾರ್ತಾ ಭವನದಲ್ಲಿ ನಡೆದ ‘ವಾರ್ತಾ ಸ್ಪಂದನ’ ಫೋನ್ ಇನ್ ಕಾರ್ಯಕ್ರಮದಲ್ಲಿ ಉತ್ತರ ಕನ್ನಡ ಜಿಲ್ಲಾಧಿಕಾರಿ ಡಾ.ಕೆ. ಹರೀಶಕುಮಾರ್ ತಲೆ ಸುತ್ತು ಬಂದು ಪ್ರಜ್ಞೆ ತಪ್ಪಿದ ಘಟನೆ ವಿದ್ಯಮಾನ ನಡೆಯಿತು.
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು ಆಯೋಜಿಸಿದ ಈ ಕಾರ್ಯಕ್ರಮದ ಉದ್ಘಾಟನೆಗೆಂದು ಜಿಲ್ಲಾಧಿಕಾರಿ ಡಾ.ಕೆ.ಹರೀಶಕುಮಾರ್ ಬಂದಿದ್ದರು.

ಸಭಾ ಕಾರ್ಯಕ್ರಮ ಆರಂಭಗೊಂಡ ಕೆಲವೇ ನಿಮಿಷ ನಿಮಿಷಗಳಲ್ಲಿ ವೇದಿಕೆಯಲ್ಲಿ ಕುಳಿತಿದ್ದ ಜಿಲ್ಲಾಧಿಕಾರಿ ಪ್ರಜ್ಞೆ ತಪ್ಪಿದರು.
ಈ ವೇಳೆ ಮಾಧ್ಯಮದವರು, ಆರೋಗ್ಯ ಇಲಾಖೆಯ ಸಿಬ್ಬಂದಿ, ಅಧಿಕಾರಿಗಳು ಸ್ಥಳದಲ್ಲಿದ್ದರು.
ಎಲ್ಲರೂ ಒಮ್ಮೆ ಆತಂಕಗೊಂಡರು. ತಕ್ಷಣವೇ ಜಿಲ್ಲಾಧಿಕಾರಿಯವರಿಗೆ ಆರೋಗ್ಯ ಇಲಾಖೆಯ ಅಧಿಕಾರಿಗಳು ಪ್ರಥಮ ಚಿಕಿತ್ಸೆ ನೀಡಿದರು. ಕೆಲವು ನಿಮಿಷಗಳ ಬಳಿಕ ಅವರು ಚೇತರಿಸಿಕೊಂಡರು
Leave a Comment