
ಕಾರವಾರ/ ರಾಜ್ಯಾದ್ಯಂತ ಪಲ್ಸ್ ಪೋಲಿಯೋ ಅಭಿಯಾನ ಜನವರಿ 19 ರಿಂದ ನಡೆಯಲಿದ್ದು, ಇವರ ಅಂಗವಾಗಿ ಜಿಲ್ಲೆಯ 5 ವರ್ಷದೊಳಗಿನ ಎಲ್ಲ ಮಕ್ಕಳಿಗೂ ಎರಡು ಹನಿ ಪಲ್ಸ್ ಪೋಲಿಯೋ ಲಸಿಕೆ ಹಾಕುವ ವ್ಯವಸ್ಥೆ ಮಾಡಲಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಜಿ ಎನ್. ಅಶೋಕ್ ಕುಮಾರ್ ತಿಳಿಸಿದ್ದಾರೆ.
ಜಿಲ್ಲೆಯ ನಗರ ಪ್ರದೇಶಗಳಲ್ಲಿ 22,505 ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ 81,849 ಒಟ್ಟೂ 1,04,354 5 ವರ್ಷದೊಳಗಿನ ಮಕ್ಕಳನ್ನು ಗುರುತಿಸಿದೆ.
ಪೂರ್ಣ ಪ್ರಗತಿ ಸಾಧಿಸಲು ಆರೋಗ್ಯ ಮತ್ತು ಕು.ಕ. ಇಲಾಖೆ ಸಜ್ಜಾಗಿದೆ. ಜಿಲ್ಲೆಯ ಎಲ್ಲಾ ಇಲಾಖೆಗಳು ಈ ಕಾರ್ಯಕ್ಕೆ ಸಹಕಾರ ನೀಡುತ್ತದೆ. ಜಿಲ್ಲೆಯಲ್ಲಿ ಒಟ್ಟು 878 ಪಲ್ಸ್ ಪೋಲಿಯೋ ಭೂತ್ಗಳನ್ನು ನಿರ್ಮಿಸಿದ್ದು ಒಟ್ಟು 3460 ಇಲಾಖೆ ಹಾಗೂ ಇಲಾಖೇತರ ಮತ್ತು ಸ್ವಯಂ ಸೇವಾ ಸಂಸ್ಥೆಯ ಸದಸ್ಯರನ್ನು ನಿಯೋಜಿಸಲಾಗಿದೆ.

ಅಭಿಯಾನದ ಮೇಲ್ವಿಚಾರಣೆಗಾಗಿ ಒಟ್ಟು 175 ಮೇಲ್ವಿಚಾರಕರನ್ನು ಹಾಗೂ ಎಲ್ಲ ತಾಲೂಕುಗಳಿಗೆ ನೋಡೆಲ್ ಅಧಿಕಾರಿಗಳನ್ನು ನಿಯೋಜಿಸಲಾಗಿದೆ. ವಿಶೇಷವಾಗಿ ರೋಟರಿ ಕ್ಲಬ್ ಹಾಗೂ ಇತರೇ ಸ್ವಯಂ ಸೇವಾ ಸಂಸ್ಥೆಗಳು ಈ ಅಭಿಯಾನದಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುವಂತೆ ಜಿಲ್ಲಾ ಆರೊಗ್ಯಧಿಕಾರಿಗಳು ಸೂಚಿಸಿದ್ದಾರೆ.

Leave a Comment