ಚಿತ್ರನಟಿ ರಶ್ಮಿಕಾ ಮಂದಣ್ಣ ಅವರ ಮನೆ ಮೇಲೆ ಐಟಿ ಅಧಿಕಾರಿಗಳು ಗುರುವಾರ ಬೆಳಗ್ಗೆ ದಾಳಿ ನಡೆಸಿದ್ದಾರೆ.
ಕೊಡಗು ಜಿಲ್ಲೆಯ ವಿರಾಜಪೇಟೆಯ ಕುಕ್ಲೂರಿನಲ್ಲಿರುವ ಅವರ ನಿವಾಸದ ಮೇಲೆ ದಾಳಿ ನಡೆಸಿದ್ದು, ದಾಖಲೆಗಳ ಪರಿಶೀಲನೆ ನಡೆಯುತ್ತಿದೆ.
ರಶ್ಮಿಕಾ ಮಂದಣ್ಣ ಅವರು ಕನ್ನಡದ ಕಿರಿಕ್ ಪಾರ್ಟಿ, ಅಂಜನಿ ಪುತ್ರ, ಚಮಕ್, ತೆಲುಗಿನ ಗೀತ ಗೋವಿಂದಂ, ದೇವದಾಸ್, ಡಿಯರ್ ಕಾಮ್ರೇಡ್, ಭೀಷ್ಮ ಚಿತ್ರಗಳಲ್ಲಿ ನಟಿಸಿದ್ದಾರೆ.
2016ರಲ್ಲಿ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ್ದಾರೆ. 10 ಕ್ಕೂ ಹೆಚ್ಚು ಅಧಿಕಾರಿಗಳಿಂದ ಶೋಧ ನಡೆಯುತ್ತಿದೆ.
ಬೆಳಗ್ಗೆ 7.30ರಿಂದ ಮಂದಣ್ಣ ಅವರ ಸೆರೆನಿಟಿ ಹಾಲ್ನಲ್ಲಿ ಐಟಿ ಅಧಿಕಾರಿಗಳು ದಾಖಲೆ ಪರಿಶೀಲನೆ ನಡೆಸುತ್ತಿದ್ದಾರೆ.
ರಶ್ಮಿಕಾ ಮಂದಣ್ಣ ಮನೆ ಮೇಲೆ ಐಟಿ ದಾಳಿಗೆ ಈ ಅಂಶಗಳೂ ಕಾರಣವಾಗಿರಬಹುದು.
Leave a Comment