
ಬೆಂಗಳೂರು/ ಮಾರ್ಚ್ 4ರಿಂದ 23ರ ವರೆಗೆ ನಡೆಯಲಿರುವ ದ್ವಿತೀಯ ಪಿಯು ಪರೀಕ್ಷೆಗಳಿಗೆ, ವಿದ್ಯಾರ್ಥಿಗಳು ಆನ್ ಲೈನ್ ಮೂಲಕ ಪ್ರವೇಶ ಪತ್ರ ಡೌನ್ ಲೋಡ್ ಮಾಡಿಕೊಳ್ಳವ ಪ್ರಕ್ರಿಯೆ ಇಂದಿನಿಂದ ಆರಂಭವಾಗಿದೆ. ಹೀಗಾಗಿ ತಪ್ಪದೇ ದ್ವಿತೀಯ ಪಿಯು ವಿದ್ಯಾರ್ಥಿಗಳು ಆನ್ ಲೈನ್ ನಲ್ಲಿ ತಮ್ಮ ತಮ್ಮ ಪ್ರವೇಶ ಪತ್ರವನ್ನು ಡೌನ್ ಲೋಡ್ ಮಾಡಿಕೊಳ್ಳಬಹುದಾಗಿದೆ.

ಈ ಕುರಿತಂತೆ ಪಿಯು ಇಲಾಖೆಯ ನಿರ್ದೇಶಕಿ ಎಂ ಕನಗವಲ್ಲಿ ಪ್ರಕಟಣೆಯಲ್ಲಿ ತಿಳಿಸಿದ್ದು, ಇದೇ ಜನವರಿ 25ರಿಂದ ಫೆಬ್ರವರಿ 10ರ ವರೆಗೆ ಪಿಯು ವಿದ್ಯಾರ್ಥಿಗಳಿಗೆ ಪ್ರಾಯೋಗಿಕ ಪರೀಕ್ಷೆಗಳು ಆರಂಭವಾಗಲಿವೆ. ಹೀಗಾಗಿ ವಿದ್ಯಾರ್ಥಿಗಳಿಗೆ ತೊಂದರೆ ಆಗದಂತೆ ಆನ್ ಲೈನ್ ಮೂಲಕವೇ ಪ್ರವೇಶ ಪತ್ರ ಡೌನ್ ಲೋಡ್ ಮಾಡಿಕೊಳ್ಳಲು ಇಂದಿನಿಂದಲೇ ಪ್ರಕ್ರಿಯೆ ಆರಂಭಗೊಂಡಿದೆ ಎಂಬುದಾಗಿ ತಿಳಿಸಿದ್ದಾರೆ.
ಇನ್ನೂ ಜನವರಿ 25ರಿಂದ ಫೆಬ್ರವರಿ 10ರ ವರೆಗೆ ನಡೆಯಲಿರುವ ಪ್ರಾಯೋಗಿಕ ಪರೀಕ್ಷೆ ಕುರಿತಂತೆ ಅಭ್ಯರ್ಥಿಗಳ ಪಟ್ಟಿ, ಅಂಕಪಟ್ಟಿ ಹಾಗೂ ಉತ್ತರ ಪತ್ರಿಕೆಗಳನ್ನು ಆಯಾ ಪ್ರಾಯೋಗಿಕ ಪರೀಕ್ಷಾ ಕೇಂದ್ರಗಳಿಗೆ ರವಾನಿಸಲಾಗಿದೆ.

Leave a Comment