
ಬೆಂಗಳೂರು/ ವಿವಿಧ ಬೇಡಿಕೆಗಳಿಗೆ ಒತ್ತಾಯಿಸಿ, ಆಶಾ ಕಾರ್ಯಕರ್ತೆಯರು ಪ್ರತಿಭಟನೆಗೆ ಇಳಿದಿದ್ದರು. ಈ ವೇಳೆ ಆರೋಗ್ಯ ಸಚಿವ ಬಿ ಶ್ರೀರಾಮುಲು ಭರವಸೆಯ ಮೇರೆಗೆ ಪ್ರತಿಭಟನೆ ಕೈಬಿಡಲಾಗಿತ್ತು. ಇಂತಹ ಆಶಾ ಕಾರ್ಯಕರ್ತೆಯರಿಗೆ ರಾಜ್ಯ ಸರ್ಕಾರದಿಂದ ಸಿಹಿಸುದ್ದಿ ಹೊರ ಬಿದ್ದಿದ್ದು, ರೂ.3,000 ಪ್ರೋತ್ಸಾಹ ಧನ ಹೆಚ್ಚಳಕ್ಕೆ ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ ನೀಡಲಾಗಿದೆ.

ಇಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ನೇತೃತ್ವದ ಮಹತ್ವದ ಸಚಿವ ಸಂಪುಟ ಸಭೆ ನಡೆಯಿತು. ಈ ಸಚಿವ ಸಂಪುಟ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆಸಿ ಮಾಧುಸ್ವಾಮಿ, ಆಶಾ ಕಾರ್ಯಕರ್ತೆಯರ ಪ್ರೋತ್ಸಾಹ ಧನವನ್ನು ಮೂರು ಸಾವಿರ ಹೆಚ್ಚಿಸುವ ಬಗ್ಗೆ ಸಂಪುಟ ಸಭೆಯಲ್ಲಿ ಒಪ್ಪಿಗೆ ನೀಡಲಾಗಿದೆ ಎಂದು ತಿಳಿಸಿದರು

Leave a Comment