• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಶ್ರೀನಿವಾಸ ಗೌಡರನ್ನು ಕರೆಸಿ ಪರಿಣಿತರಿಂದ ತರಬೇತಿ ಕೊಡಿಸಲಾಗುವುದು-ಕಿರಣ್‌‌ ರಿಜಿಜು

February 16, 2020 by Sachin Hegde Leave a Comment

Kiren Rijiju

ಶ್ರೀನಿವಾಸ ಗೌಡರನ್ನು ಕರೆಸಿ ಪರಿಣಿತರಿಂದ ತರಬೇತಿ ಕೊಡಿಸಲಾಗುವುದು ಎಂದು ಕ್ರೀಡಾ ಸಚಿವ ಕಿರಣ್‌‌ ರಿಜಿಜು ಅವರು ಟ್ವೀಟ್‌ ಮೂಲಕ ತಿಳಿಸಿದ್ದಾರೆ. ಈ ಬಗ್ಗೆ ಮಹೀಂದ್ರಾ ಗ್ರೂಪ್ ಅಧ್ಯಕ್ಷ ಆನಂದ್ ಮಹೀಂದ್ರಾ ಅವರು, ಒಮ್ಮೆ ಈ ವ್ಯಕ್ತಿಯ ಮೈಕಟ್ಟನ್ನು ಗಮನಿಸಿ, ಈತ ಅಸಾಧಾರಣ ಸಾಹಸ ಮಾಡಲು ಸಮರ್ಥನಾಗಿದ್ದಾನೆ. ಈತನಿಗೆ ಕೇಂದ್ರ ಕ್ರೀಡಾ ಸಚಿವರಾದ ಕಿರಿಣ್ ರಿಜಿಜು 100 ಮೀ ಓಟಗಾರನಾಗಲು ಸಮರ್ಥ ತರಬೇತಿಯನ್ನು ನೀಡಲು ಅನುಕೂಲ ಕಲ್ಪಿಸಬೇಕು ಅಥವಾ ಓಲಂಪಿಕ್‌‌‌ನಲ್ಲಿ ಕಂಬಳವನ್ನು ಸೇರಿಸಬೇಕು.

kambala,Srinivasa Gowda

ಏನೇ ಆಗಲಿ ಶ್ರೀನಿವಾಸ ಗೌಡ ಅವರಿಗೆ ಚಿನ್ನದ ಪದಕಸಿಗಬೇಕು ಎಂದು ಟ್ವೀಟ್‌‌ ಮಾಡಿದ್ದರು.ಈ ಟ್ವೀಟ್‌ಗೆ ಪ್ರತಿಕ್ರಿಯೆ ನೀಡಿದ ಕ್ರೀಡಾ ಸಚಿವ ಕಿರಣ್‌‌ ರಿಜಿಜು ಅವರು ಶ್ರೀನಿವಾಸ ಗೌಡರನ್ನು ಕರೆಸಿ ಪರಿಣಿತರಿಂದ ತರಬೇತಿ ಕೊಡಿಸಲಾಗುವುದು ಎಂದಿದ್ದಾರೆ.ಜಗತ್ತಿನ ಅತೀ ವೇಗದ ಓಟಗಾರ ಹುಸೈನ್‌ ಬೋಲ್ಟ್‌ ದಾಖಲೆಯನ್ನು ಹಿಂದಿಕ್ಕಿ ಕರ್ನಾಟಕದ ಕರಾವಳಿಯ ಕಂಬಳ ಕೋಣಗಳ ಓಟಗಾರ ಶ್ರೀನಿವಾಸ್ ಹೊಸ ದಾಖಲೆ ಬರೆದಿದ್ದಾರೆ. ಕಂಬಳ ಕ್ರೀಡೆಯಲ್ಲಿ ಮಿಜಾರು ಅಶ್ವಥಪುರ ಶ್ರೀನಿವಾಸ ಗೌಡ ಎಂದೇ ಹೆಸರುವಾಸಿಯಾಗಿರುವ ದಕ್ಷಿಣ ಕನ್ನಡ ಜಿಲ್ಲೆಯ ಮೂಡಬಿದ್ರೆಯ ಅಶ್ವಥಪುರ ನಿವಾಸಿ ಕಂಬಳ ಕೋಣದ ಓಟಗಾರ ಶ್ರೀನಿವಾಸ ಗೌಡ ಅವರು ಈಗ ಹೊಸ ದಾಖಲೆಯನ್ನು ಬರೆದಿದ್ದಾರೆ.ಹುಸೈನ್‌ ಬೋಲ್ಟ್‌ 100 ಮೀ. ಓಟವನ್ನು ಕೇವಲ 9.58 ಸೆಕೆಂಡ್ ಅವಧಿಯಲ್ಲಿ ಕ್ರಮಿಸಿದರೆ, ಶ್ರೀನಿವಾಸ ಗೌಡ ಕಂಬಳ ಗದ್ದೆಯ ಕೆಸರಿನಲ್ಲಿ ಕೋಣಗಳ ಜೊತೆ 100 ಮೀಟರನ್ನು ಕೇವಲ 9.55 ಸೆಕೆಂಡ್‍ಗಳಲ್ಲಿ ಪೂರ್ಣಗೊಳಿಸಿದ್ದಾರೆ. ಶ್ರೀನಿವಾಸ ಗೌಡ ಅವರು ಯಾವ ತರಬೇತಿಯನ್ನು ಪಡೆಯದೆ ಸ್ವಂತ ಆಸಕ್ತಿಯಿಂದ ಕಂಬಳ ಕ್ಷೇತ್ರದಲ್ಲಿ ತೊಡಗಿಸಿಕೊಂಡು ದಾಖಲೆ ಮಾಡಿದ್ದಾರೆ. ಈ ಋತುವಿನ ಕಂಬಳ ಕ್ರೀಡಾಕೂಟದಲ್ಲಿ ಅತೀ ಹೆಚ್ಚು ಚಿನ್ನದ ಪದಕಗಳನ್ನು ಪಡೆಯುವ ಮೂಲಕ ಕಂಬಳ ಕೂಟದ ಚಿನ್ನದ ಓಟಗಾರನಾಗಿ ಪ್ರಸಿದ್ಧಿಯಾಗಿದ್ದಾರೆ.ಆನಂದ್ ಮಹೀಂದ್ರಾ ತಮ್ಮ ಟ್ವೀಟ್‌‌ನಲ್ಲಿ ಕರ್ನಾಟಕದ ಕರಾವಳಿ ಪ್ರದೇಶದ ಸಾಂಪ್ರದಾಯಿಕ ಕ್ರೀಡೆಯಾದ ಕಂಬಳಕ್ಕೆ ಬೆಂಬಲ ನೀಡಿದ್ದು, ಗ್ರಾಮೀಣ ಪ್ರತಿಭೆಗಳನ್ನು ಪ್ರೋತ್ಸಾಹಿಸಿದ್ದಕ್ಕಾಗಿ ಹಾಗೂ ಕಂಬಳವನ್ನು ಬೆಂಬಲಿಸಿದ್ದಕ್ಕಾಗಿ ಆನಂದ್ ಮಹೀಂದ್ರಾ ಅವರಿಗೆ ಟ್ವೀಟಿಗರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

kambala,Srinivasa Gowda

I'll call Karnataka's Srinivasa Gowda for trials by top SAI Coaches. There's lack of knowledge in masses about the standards of Olympics especially in athletics where ultimate human strength & endurance are surpassed. I'll ensure that no talents in India is left out untested. https://t.co/ohCLQ1YNK0

— Kiren Rijiju (@KirenRijiju) February 15, 2020

Share this:

  • WhatsApp
  • Twitter
  • Facebook
  • Telegram
  • Email
  • Print

Related News:

Filed Under: Canara News, Sports Tagged With: kambala, Srinivasa Gowda, ಓಟಗಾರನಾಗಲು ಸಮರ್ಥ ತರಬೇತಿ, ಟ್ವೀಟ್‌ಗೆ ಪ್ರತಿಕ್ರಿ, ತರಬೇತಿ ಕೊಡಿಸಲಾಗುವುದು-ಕಿರಣ್‌‌ ರಿಜಿಜು, ಮಹೀಂದ್ರಾ ಗ್ರೂಪ್ ಅಧ್ಯಕ್ಷ ಆನಂದ್ ಮಹೀಂದ್ರಾ, ಶ್ರೀನಿವಾಸ ಗೌಡರನ್ನು ಕರೆಸಿ ಪರಿಣಿತರಿಂದ

Explore More:

Reader Interactions

Leave a Comment Cancel reply

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2025 Canara Buzz · Contributors · Privacy Policy · Terms & Conditions · Member of Digital Avatar

 

Loading Comments...