ಬೆಂಗಳೂರು ನಗರದ ಫ್ರೀಡಂ ಪಾರ್ಕ್ ನಲ್ಲಿ ಆಯೋಜಿಸಲಾದ ಸಿಎಎ ವಿರುದ್ಧದ ಪ್ರತಿಭಟನೆಯಲ್ಲಿ ಅಮೂಲ್ಯ ಲಿಯೋನ ಎನ್ನುವಂತ ಯುವತಿಯೋರ್ವಳು ಪಾಕಿಸ್ತಾನ್ ಜಿಂದಾಬಾದ್ ಎಂಬುದಾಗಿ ಘೋಷಣೆ ಕೂಗುವ ಮೂಲಕ ಭಾಷಣ ಮಾಡಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಉಪ್ಪಾರಪೇಟೆ ಪೊಲೀಸರು ಸೋ ಮೋಟೋ ಕೇಸ್ ದಾಖಲಿಸಿದ್ದರು. ಅಲ್ಲದೇ ಇದೀಗ ಪಾಕ್ ಪರ ಘೋಷಣೆ ಕೂಗಿದ ಅಮೂಲ್ಯ ಲಿಯೋನ ವಿರುದ್ಧ ದೋಶದ್ರೋಹ ಪ್ರಕರಣ ದಾಖಲಿಸಲಾಗಿದೆ.
ಕುರಿತು ಮಾಧ್ಯಮಗಳಿಗೆ ವಿಡಿಯೋ ಹೇಳಿಕೆ ಬಿಡುಗಡೆ ಮಾಡಿದ ಸಂಸದ ಅನಂತಕುಮಾರ್ ಹೆಗಡೆ ಎಡಪಂತೀಯ ವಿಚಾರ ದೇಶದ್ರೋಹಿ ವಿಚಾರವಾಗಿ ಮಾರ್ಪಟ್ಟಿದೆ.
ಸಿ.ಎ.ಎ ಹೋರಾಟ ದೇಶದ್ರೋಹಿ ಹೋರಾಟವಾಗಿ ,ದೇಶದ್ರೋಹಿ ಚಟುವಟಿಕೆಯಾಗಿ ಹಿಂದು ವಿರೋಧಿ ಹೋರಾಟವಾಗಿ ಮಾರ್ಪಟ್ಟಿದೆ.
ವೇದಿಕೆ ಮೇಲಿರುವ ಎಲ್ಲರ ಮೇಲೆ ದೇಶದ್ರೋಹದ ಕೇಸು ದಾಖಲಿಸಬೇಕು,ದೇಶದ್ರೋಹಿಗಳನ್ನು ತಕ್ಷಣ ಬಂಧಿಸಬೇಕು,ದೇಶದ್ರೋಹಿಗಳ ಆಡಂಬರ ಆಗಬಾರದು ಎಂದು ಆಕ್ರೋಶ ವ್ಯಕ್ತಪಡಿಸಿದ್ದು ಎಲ್ಲರನ್ನೂ ದೇಶದ್ರೋಹದ ಪ್ರಕರಣದಲ್ಲಿ ಬಂಧಿಸುವಂತೆ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.
ಪಾಕ್ ಪರ ಹುಬ್ಬಳ್ಳಿಯಲ್ಲಿ ಘೋಷಣೆ ಕೂಗಿದ ಮೂವರು ಯುವಕರು ಇಂಡಗಾಲ ಜೈಲು ಸೇರಿದ್ದಾರೆ. ಇದೀಗ ಇಂತದ್ದೇ ಪ್ರಕರಣವೊಂದು ನಗರದ ಫ್ರೀಡಂ ಪಾರ್ಕ್ ನಲ್ಲಿ ನಡೆದಿದೆ. ಕೊಪ್ಪ ಮೂಲದ ಯುವತಿಯೋರ್ವಳು ಪಾಕಿಸ್ತಾನ್ ಜಿಂದಾಬಾದ್ ಎಂಬುದಾಗಿ ಘೋಷಣೆ ಕೂಗಿದ್ದಾಳೆ. ಈ ಮೂಲಕ ದೇಶ ದ್ರೋಹಿ ಘೋಷಣೆ ಕೂಗಿ, ಪೊಲೀಸರಿಂದ ಬಂಧನಕ್ಕೆ ಒಳಗಾಗಿದ್ದಾಳೆ.
Leave a Comment