ಹೊನ್ನಾವರ : ಉತ್ತರಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಕೆಳಗಿನ ಇಡಗುಂಜಿಯಲ್ಲಿ ತಡರಾತ್ರಿ ಮನೆಯೊಂದಕ್ಕೆ ಆಕಸ್ಮಿಕ ಬೆಂಕಿ ತಗುಲಿ ಮನೆಯಲ್ಲಿದ್ದ 30ಕ್ಕೂ ಹೆಚ್ಚು ಮಂದಿ ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ತಡರಾತ್ರಿ ಸಂಭವಿಸಿದೆ.
ಕೆಳಗಿನ ಇಡಗುಂಜಿ ಅಣ್ಣಯ್ಯ ಗೌಡ ಅವರ ಮನೆ ಬೆಂಕಿಗೆ ಆಹುತಿಯಾಗಿದೆ. ಇವರದ್ದು ಅವಿಭಕ್ತಕುಟುಂವಾಗಿದ್ದು, ಮನೆಯಲ್ಲಿ ಸುಮಾರು30ಕ್ಕೂ ಹೆಚ್ಚು ಮಂದಿ ವಾಸವಾಗಿದ್ದಾರೆ. ಎಲ್ಲರೂ ನಿನ್ನೆ ರಾತ್ರಿ ಊಟ ಮಾಡಿ ನಿದ್ದೆಗೆ ಜಾರಿದ್ದರು. ರಾತ್ರಿ ಸುಮಾರು 3ಗಂಟೆಗೆ ಮನೆಗೆ ಬೆಂಕಿ ಹೊತ್ತಿಕೊಂಡಿದೆ ಎನ್ನಲಾಗಿದೆ. ಬೆಂಕಿ ಬಿದ್ದ ತಕ್ಷಣ ಮನೆಯಲ್ಲಿದ್ದರು ಹೊರ ಓಡಿ ಬಂದು ತಮ್ಮ ತಮ್ಮ ಪ್ರಾಣ ರಕ್ಷಣೆ ಮಾಡಿಕೊಂಡಿದ್ದಾರೆ. ಆದರೆ ಬೆಂಕಿಯಿಂದಾಗಿ ಮನೆಯಲ್ಲಿದ್ದ ಬಟ್ಟೆ, ಬಂಗಾರ,ಟಿವಿ ಸೇರಿಂದಂತೆ ಎಲ್ಲೂ ಬೆಂಕಿಯಲ್ಲಿ ಕರಕಲಾಗಿದ್ದು. ಸುಮಾರು ಐವತ್ತು ಲಕ್ಷಕ್ಕೂ ಅಧಿಕ ಹಾನಿ ಆಗಿರುವುದಾಗು ಅಂದಾಜಿಸಲಾಗಿದೆ.

ಬೆಂಕಿ ಬಿದ್ದ ತಕ್ಷಣ ಸ್ಥಳೀಯರು ಹಾಗೂ ಅಗ್ನಿಶಾಮಕ ದಳ ಸಿಬ್ಬಂದಿಗಳು ಬೆಂಕಿ ನಂದಿಸುವಲ್ಲಿ ಯಶಸ್ವಿ ಆಗಿದ್ದಾರೆ. ಈ ಬಗ್ಗೆ ಮಂಕಿ ಪೊಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಶಾಸಕ ಸುನೀಲ್ ನಾಯ್ಕ ಅಧಿಕಾರಿಗಳೊಂದಿಗೆ ಭೇಟಿ ನೀಡಿದ್ದು, ಸರಕಾರದಿಂದ ಅತೀ ಶೀಘ್ರದಲ್ಲಿ ಪರಿಹಾರ ನೀಡುವುದಾಗಿ ಭರವಸೆ ನೀಡಿದ್ದಾರೆ.











Leave a Comment