
ರಾಜ್ಯದ ಉಪಮುಖ್ಯಮಂತ್ರಿ ಹಾಗೂ ಸಾರಿಗೆ ಸಚೀವರಾದ ಲಕ್ಷ್ಮಣ ಸಂಗಪ್ಪ ಸವದಿ ಫೆಬ್ರವರಿ 29ರಂದು ಹೊನ್ನಾವರಕ್ಕೆ ಆಗಮಿಸಲಿದ್ದಾರೆ. ಪಟ್ಟಣದ ಬಹುವರ್ಷದ ಬೇಡಿಕೆಯಾದ ಹೊನ್ನಾವರ ಬಸ್ ನಿಲ್ದಾಣದ ಶಂಕುಸ್ಥಾಪನೆಗೆ ಆಗಮಿಸಲಿದ್ದಾರೆ. ಅಲ್ಲದೇ ಇವರೊಂದಿಗೆ ಜಿಲ್ಲಾ ಉಸ್ತುವಾರಿ ಸಚೀವೆ ಶಶಿಕಲಾ ಜೊಲ್ಲೆ, ಕಾರ್ಮಿಕ ಸಚೀವರಾದ ಶಿವರಾಮ ಹೆಬ್ಬಾರ, ಜಿಲ್ಲೆಯ ಶಾಸಕರು, ಸಾರಿಗೆ ಇಲಾಖೆಯ ಅಧಿಕಾರಿಗಳು ಸಮ್ಮುಖದಲ್ಲಿ ಶಂಕುಸ್ಥಾಪನಾ ಕಾರ್ಯಕ್ರಮ ನೇರವೇರಲಿದೆ. ಇದರೊಂದಿಗೆ ದಶಕಗಳ ನೂತನ ಬಸ್ ನಿಲ್ಧಾಣದ ನಸಾಗುವತ್ತ ಸಾಗಲಿದೆ.
ಇದರ ಪೂರ್ವಭಾವಿಯಾಗಿ ಬುಧವಾರ ಬಸ್ ನಿಲ್ದಾಣಕ್ಕೆ ಭೇಟಿ ನೀಡಿದ ಶಾಸಕ ದಿನಕರ ಶೆಟ್ಟಿ ಅಧಿಕಾರಿಗಳೊಂದಿಗೆ ಚರ್ಚಿಸಿ ಹೆಚ್ಚಿನ ಸಂಖ್ಯೆಯಲ್ಲಿ ಶನಿವಾರ ಆಗಮಿಸುವಂತೆ ಕರೆನೀಡಿದರು.
ಈ ಸಂದರ್ಭದಲ್ಲಿ ಬಿಜೆಪಿ ತಾಲೂಕ ಅಧ್ಯಕ್ಷ ಸುಬ್ರಾಯ ನಾಯ್ಕ ನಿಯೋಜಿತ ನೂತನ ಅಧ್ಯಕ್ಷ ರಾಜೇಶ ಭಂಡಾರಿ, ಮಾಜಿ ಜಿಲ್ಲಾ ಪಂಚಾಯತ ಸದಸ್ಯ ಸುಬ್ರಹ್ಮಣ್ಯ ಶಾಸ್ತ್ರಿ, ಪಟ್ಟಣ ಪಂಚಾಯತ ಸದಸ್ಯರು, ಬಿಜೆಪಿ ಮುಖಂಡರು ಉಪಸ್ತಿತರಿದ್ದರು.





Leave a Comment