
ಹಳಿಯಾಳ: ಪಟ್ಟಣ ಸೇರಿದಂತೆ ಗ್ರಾಮಾಂತರ ಭಾಗದಲ್ಲಿ ಹಲವಾರು ವರ್ಷಗಳಿಂದ ಎಲ್ಲರೂ ಸೇರಿ ಶಾಂತಿಯುತವಾಗಿ ಹೋಳಿ ಹಬ್ಬವನ್ನು ಆಚರಿಸುತ್ತಿದ್ದು ಈ ಬಾರಿಯು ಶಾಂತಿಯುತವಾಗಿ ಸೌಹಾರ್ದತೆಯಿಂದ ಹೋಳಿ ಆಚರಿಸಿ ಇತರರಿಗೂ ಮಾದರಿಯಾಗಬೇಕು ಎಂದು ಹಳಿಯಾಳ ತಹಶೀಲ್ದಾರ ವಿದ್ಯಾಧರ ಗುಳುಗುಳಿ ಹಾಗೂ ಪಟ್ಟಣದ ಸಿಪಿಐ ಬಿ.ಎಸ್ ಲೋಕಾಪೂರ ಮನವಿ ಮಾಡಿದರು.
ಇಲ್ಲಿಯ ಮಿನಿ ವಿಧಾನಸೌಧದ ಸಭಾಭವನದಲ್ಲಿ ಹೋಳಿ(ರಂಗಿನ) ಹಬ್ಬದ ಪ್ರಯುಕ್ತ ಕರೆಯಲಾಗಿದ್ದ, ಶಾಂತಿ ಸಭೆಯಲ್ಲಿ ಅವರು ಮಾತನಾಡಿ ಈ ಹಬ್ಬಕ್ಕೆ ಎಲ್ಲಾ ರೀತಿಯ ಪೋಲಿಸ್ ಬಂದೂಬಸ್ತ್ ಮಾಡಲಾಗಿದೆ. ಬಣ್ಣವನ್ನು ಸರಿಯಾಗಿ ಬಳಸಿ ಇನ್ನೂಬ್ಬರ ಮೇಲೆ ಎರಚುವಾಗ ಬಣ್ಣ ಹಚ್ಚುವಾಗ ಅವರ ಆರೋಗ್ಯದ ಮೇಲೆ ಹಾನಿ ಉಂಟಾಗದಂತೆ ಬಣ್ಣವನ್ನು ಹಚ್ಚಬೇಕು ಇಲ್ಲವಾದಲ್ಲಿ ಆರೋಗ್ಯದ ಮೇಲೆ ಪರಿಣಾಮ ಬೀಳಬಹುದು ಇದಕ್ಕೆ ಸಾರ್ವಜನಿಕರು ಎಚ್ಚರಿಕೆ ವಹಿಸಬೇಕು ಹಾಗೂ ಇಲ್ಲ ಸಲ್ಲದ ವಿಷಯಗಳಿಗೆ ಆಸ್ಪದ ನೀಡಬಾರದು ಎಂದು ಸಲಹೆ ನೀಡಲಾಯಿತು.

ಹಳಿಯಾಳ ಪಟ್ಟಣದಲ್ಲಿ ಮಂಗಳವಾರ ನಡೆಯುವ ಈ ಹಬ್ಬದಲ್ಲಿ ಮಹಿಳೆಯರಿಗೆ, ವೃದ್ಧರಿಗೆ, ಚಿಕ್ಕ ಮಕ್ಕಳಿಗೆ ತೊಂದರೆಯಾಗದಂತೆ ಹಬ್ಬವನ್ನು ಆಚರಿಸಿ ಎಂದು ಕರೆ ನೀಡಿದರು.
ಈ ಸಂದರ್ಭದಲ್ಲಿ ಕರೋನಾ ವೈರಸ್ ಬಗ್ಗೆ ಅರಿವು ಹಾಗೂ ಮುಂಜಾಗ್ರತೆ ಕ್ರಮಗಳ ಬಗ್ಗೆ ಮಾಹಿತಿ ನೀಡಲಾಯಿತು.
ಪಿ.ಎಸ್.ಐ ಯಲ್ಲಾಲಿಂಗ ಕುನ್ನೂರ, ಪುರಸಭೆ ನೂತನ ಸದಸ್ಯರು, ಸಂಘ ಸಂಸ್ಥೆಗಳ ಪದಾಧಿಕಾರಿಗಳು, ಮುಖ್ಯಸ್ಥರು, ಆರೋಗ್ಯ ಇಲಾಖೆಯ ಅಧಿಕಾರಿಗಳು ಇತರರು ಇದ್ದರು.

Leave a Comment