
ದಕ್ಷಿಣ ಕನ್ನಡ ಜಿಲ್ಲಾಡಳಿತದ ಕರೆಗೆ ಸ್ಪಂದಿಸಿದ ಸುಧಾಮೂರ್ತಿ ಅಮ್ಮ. ಮನವಿ ಸಲ್ಲಿಸಿದ 36 ಗಂಟೆಗಳಲ್ಲಿ 28 ಲಕ್ಷ ರೂ. ಮೌಲ್ಯದ ವೈದ್ಯಕೀಯ ಸಾಮಗ್ರಿಗಳನ್ನು ಕಳುಹಿಸಿಕೊಟ್ಟಿದ್ದಾರೆ.
ಅವರು ಕಳುಹಿಸಿದ ವೈದ್ಯಕೀಯ ಸಾಮಗ್ರಿಗಳು ಮಂಗಳೂರಿಗೆ ತಲುಪಿವೆ. ಮಹಾಮಾರಿ #covid19 ವಿರುದ್ಧದ ಹೋರಾಟದಲ್ಲಿ ಶ್ರಮಿಸುತ್ತಿರುವ ದಕ್ಷಿಣ ಕನ್ನಡ ಜಿಲ್ಲಾಡಳಿತದ ಮನವಿಗೆ ಸ್ಪಂದಿಸಿ ಅಗತ್ಯ ವಸ್ತುಗಳಾದ,
165000 ಮಾಸ್ಕ್
5000 ಬಾಟಲ್ ಸ್ಯಾನಿಟೈಸರ್ (500 ML)
85 ಗಾಗಲ್ಸ್
03 ಬ್ಲಾಕ್ ಸರ್ಜಿಕಲ್ ಗ್ಲೌಸ್
50 ಕ್ಯಾಪ್ ಗಳು
30 ಪೂರ್ತಿ ಕಾಲು ಮುಚ್ಚುವಂತ ವೈದ್ಯಕೀಯ ವಸ್ತುಗಳು
2000 ಎನ್ 95″ ಮಾಸ್ಕ್
300 ಫಾಗ್ ಫ್ರೀ ಮಾಸ್ಕ್
60 ವಿಶೇಷ ಮಾದರಿಯ ಸರ್ಜಿಕಲ್ ಗ್ಲೌಸ್ ಅನ್ನು ದಕ್ಷಿಣ ಕನ್ನಡ ಜಿಲ್ಲೆಗೆ ಸರಬರಾಜು ಮಾಡಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯ ಜನರಿಗೆ ತುರ್ತು ಸ್ಪಂದನೆ ನೀಡಿದ ಶ್ರೀಮತಿ ಸುಧಾಮೂರ್ತಿ ಅಮ್ಮನವರಿಗೆ ಜಿಲ್ಲೆಯ ಸಮಸ್ತ ಜನರ ಪರವಾಗಿ ಅನಂತ ಅನಂತ ಧನ್ಯವಾದಗಳು.
Leave a Comment