• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ವಿಶಾಖಾಪಟ್ಟಣಂನಲ್ಲಿ ಭಾರಿ ದುರಂತ ವಿಷಾನೀಲ ಸೋರಿಕೆ 8 ಕ್ಕೂ ಹೆಚ್ಚು ಜನರ ದುರ್ಮರಣ ನೂರಾರು #ಜನ #ಅಸ್ವಸ್ಥ.

May 7, 2020 by Yogaraj SK Leave a Comment

96360100 1157794514574943 6684251821738819584 n

#ಆಂಧ್ರಪ್ರದೇಶದ :- ಇಲ್ಲಿಯ ವಿಶಾಖಪಟ್ಟಣಂನ #ಬಹುರಾಷ್ಟ್ರೀಯ ಸಂಸ್ಥೆಯ ಎಲ್ ಜಿ #ಪಾಲಿಮರ್ಸ್ #ಇಂಡಸ್ಟ್ರೀಯಲ್ಲಿಯ ರಾಸಾಯನಿಕ ಸ್ಥಾವರದಿಂದ ವಿಷಕಾರಿ ಅನಿಲ ಸೋರಿಕೆಯಾದ ಹಿನ್ನೆಲೆಯಲ್ಲಿ 8 ಕ್ಕೂ ಹೆಚ್ಚು ಜನ ವಿಷನೀಲ ಸೇವನೆಯಿಂದ ಸಾವನ್ನಪ್ಪಿದ್ದು 220 ಕ್ಕೂ ಹೆಚ್ಚು ಜನರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ವರದಿಯಾಗಿದೆ.

ಆಟಿಕೆಗಳು ಮತ್ತು ವಿವಿಧ ರೀತಿಯ ಪ್ಲಾಸ್ಟಿಕ್ ಉತ್ಪನ್ನಗಳನ್ನು ತಯಾರಿಸಲಾಗುತ್ತಿದ್ದ ಕಂಪೆನಿ ಇದಾಗಿದೆ.

96548743 1157794417908286 1444408290602647552 n

ಸುಮಾರು 1 ಸಾವಿರಕ್ಕೂ ಅಧೀಕ ಮಂದಿ ಅಸ್ವಸ್ಥರಾಗಿದ್ದು ಸ್ಥಳಕ್ಕೆ ಪೊಲೀಸರು, ಆಂಬ್ಯುಲೆನ್ಸ್‌ಗಳು, ಅಗ್ನಿಶಾಮಕ ಸಿಬ್ಬಂದಿಗಳು ಧಾವಿಸಿದ್ದಾರೆ ಎಂದು ವರದಿ ತಿಳಿಸಿದೆ.

ಇಂದು ಮುಂಜಾನೆ ಸುಮಾರು 3 ಗಂಟೆ ಗೆ ವಿಶಾಖಪಟ್ಟಣಂನ ಗೋಪಾಲಪಟ್ಟಣದ, ನಾಯ್ಡು ತೋಟಾ ಸಮೀಪದ ಆರ್ ಆರ್ ವೆಂಕಟಪುರಂನಲ್ಲಿರುವ ಎಲ್ ಜಿ ಪಾಲಿಮರ್ಸ್ ಇಂಡಸ್ಟ್ರೀಯಲ್ಲಿ ವಿಷಾನಿಲ ಸೋರಿಕೆಯಾಗಿದ್ದು, ಗಾಳಿಯಲ್ಲಿ ವಿಷಾನಿಲ ಸುತ್ತಮುತ್ತಲ ಪ್ರದೇಶಗಳಿಗೆ ಹರಡಿದೆ. ಪರಿಣಾಮವಾಗಿ ಹಲವು ಜನರಿಗೆ ಉಸಿರಾಟದ ಸಮಸ್ಯೆ ಎದುರಾಗಿದೆ. ಮಾತ್ರವಲ್ಲದೆ ಕಣ್ಣು ಸುಡುವ ಅನುಭವವೂ ಆಗಿದ. ಹಲವು ಮಂದಿ ವಿಷಾನಿಲವನ್ನು ಉಸಿರಾಡಿ ಕೂಡಲೇ ಅಸ್ವಸ್ಥರಾಗಿದ್ದಾರೆ ಎಂದು ತಿಳಿದುಬಂದಿದೆ.

96252208 1157794391241622 2380500364135759872 n

“ಗೋಪಾಲಪಟ್ಟಣದ ಸಮೀಪದಲ್ಲಿ ಅನಿಲ ಸೋರಿಕೆಯಾಗಿದ್ದು, ಮುನ್ನೆಚ್ಚರಿಕೆಗಳಿಗಾಗಿ ಈ ಸ್ಥಳಗಳಲ್ಲಿ ವಾಸವಿರುವವರು ಮನೆಗಳಿಂದ ಹೊರಬರದಂತೆ ವಿನಂತಿಸುತ್ತಿಸುತ್ತೇವೆ ಎಂದು ವಿಶಾಖಪಟ್ಟಣಂ ಮಹಾನಗರ ಪಾಲಿಕೆ ಟ್ವೀಟ್ ಮಾಡಿದೆ.

ನೆಲದ ಮೇಲೆಯೇ ಹಲವಾರು ಜನರು ಪ್ರಜ್ಞಾಹೀನರಾಗಿ ಬಿದ್ದಿದ್ದು ಪ್ರಕರಣ ಹೆಚ್ಚು ಗಂಭೀರದಿಂದ ಕೂಡಿದ್ದು ಸಾವುನೋವುಗಳು ಹೆಚ್ಚಾಗುವ ಸಾಧ್ಯತೆಯೂ ಇದೆ ಎಂದು ವರದಿ ತಿಳಿಸಿದೆ. .ಕಾರ್ಖಾನೆಯಿಂದ ವಿಷಾನಿಲ ಸೋರಿಕೆಗೆ ನಿಖರ ಕಾರಣ ತಿಳಿದುಬಂದಿಲ್ಲವಾದರೂ, ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ.

1961ರಲ್ಲಿ ಹಿಂದೂಸ್ತಾನ್ ಪಾಲಿಮರ್ಸ್ ಎಂದು ಸ್ಥಾಪಿಸಲ್ಪಟ್ಟ ಈ ಕಂಪನಿಯನ್ನು, ನಂತರದಲ್ಲಿ ದಕ್ಷಿಣ ಕೊರಿಯಾದ ಎಲ್ ಜಿ ಕೆಮ್ ಎಂಬ ಸಂಸ್ಥೆ ನಡೆಸಿಕೊಂಡು ಬರುತ್ತಿದ್ದು 1997 ರಲ್ಲಿ ಎಲ್ ಜಿ ಪಾಲಿಮರ್ಸ್ ಇಂಡಿಯಾ ಎಂದು ಮರುನಾಮಕರಣ ಮಾಡಲಾಯಿತು.

Share this:

  • WhatsApp
  • Twitter
  • Facebook
  • Telegram
  • Email
  • Print

Related News:

Filed Under: Canara News, National News Tagged With: 8 ಕ್ಕೂ ಹೆಚ್ಚು ಜನರ ದುರ್ಮರಣ ನೂರಾರು, ಅಗ್ನಿಶಾಮಕ ಸಿಬ್ಬಂದಿ, ಆಂಬ್ಯುಲೆನ್ಸ್‌ಗಳು, ಗಾಳಿಯಲ್ಲಿ ವಿಷಾನಿಲ, ಗೋಪಾಲಪಟ್ಟಣದ ಸಮೀಪ, ಜನ #ಅಸ್ವಸ್ಥ, ಬಹುರಾಷ್ಟ್ರೀಯ ಸಂಸ್ಥೆ, ವಿಶಾಖಾಪಟ್ಟಣಂನಲ್ಲಿ ಭಾರಿ ದುರಂತ ವಿಷಾನೀಲ, ಸೋರಿಕೆ

Explore More:

About Yogaraj SK

Yograj typically covers local news from Haliyal

Subscribe to News from Yogaraj

Reader Interactions

Leave a Comment Cancel reply

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2025 Canara Buzz · Contributors · Privacy Policy · Terms & Conditions · Member of Digital Avatar

 

Loading Comments...