
ಹೊನ್ನಾವರ: ಬಿಜೆಪಿ ಪಕ್ಷದ ಪ್ರದಾನ ಕಾರ್ಯದರ್ಶಿಗಳಾಗಿ ಜಿಲ್ಲಾ ಅಧ್ಯಕ್ಷರ ಆದೇಶದ ಮೇರೆಗೆ ಮಂಜುನಾಥ ನಾಯ್ಕ ಗೇರುಸೊಪ್ಪಾ ಮತ್ತು ಸುರೇಶ ನಾರಯಣ ಹರಿಕಂತ್ರ ಇವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ನೇಮಕ ಮಾಡಲಾಗಿದೆ ಎಂದು ಬಿಜೆಪಿ ಹೊನ್ನಾವರ ಮಂಡಲಾಧ್ಯಕ್ಷ ರಾಜೇಶ ವೆಂಕಟೇಶ ಭಂಡಾರಿ ಆದೇಶ ಹೊರಡಿಸಿದ್ದಾರೆ. ಅಲ್ಲದೇ ಎ.ಪಿ.ಎಂ.ಸಿಯಲ್ಲಿ ಉಪಾಧ್ಯಕ್ಷರಾಗಿ ಪರಮೇಶ್ವರಕೃಷ್ಣ ನಾಯ್ಕ ಹಳದಿಪುರ ಇವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಇವರಿಗೂ ಅಭಿನಂದನೆಗಳು. ಆಯ್ಕೆ ಪ್ರಕೀಯೆಗೆ ಸಹಕರಿಸಿದ ಶಾಸಕರಾದ ದಿನಕರ ಶೆಟ್ಟಿ, ಸುನೀಲ ನಾಯ್ಕ ಮತ್ತು ಪಕ್ಷದ ಕಾರ್ಯಕರ್ತರಿಗೂ ಅಭಿನಂದನೆಗಳು ಎಂದು ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Comment