
ಬೆಂಗಳೂರು :- ರಾಜ್ಯಸಭೆ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಇಂದು ಕಾಂಗ್ರೆಸ್ ಹಿರಿಯ ಮುಖಂಡ ಮಲ್ಲಿಕಾರ್ಜುನ ಖರ್ಗೆ ಅವರು ನಾಮಪತ್ರ ಸಲ್ಲಿಸಿದರು.
ಮಲ್ಲಿಕಾರ್ಜುನ ಖರ್ಗೆ ಅವರನ್ನು ಅಭ್ಯರ್ಥಿಯಾಗಿ ಆಯ್ಕೆ ಮಾಡಿರುವ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿಯವರಿಗೆ ಹೃತ್ಪೂರ್ವಕ ಧನ್ಯವಾದಗಳನ್ನು ಸಲ್ಲಿಸುವುದಾಗಿ ಹೇಳಿರುವ #ಶಾಸಕ_ಆರ್_ವಿ #ದೇಶಪಾಂಡೆ ಅವರು ಖರ್ಗೆ ರಾಜ್ಯಸಭೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಪ್ರತಿನಿಧಿಸಲಿದ್ದು, ರಾಜ್ಯಕ್ಕೆ ಹಾಗೂ ಕಾಂಗ್ರೆಸ್ ಪಕ್ಷಕ್ಕೆ ಅನುಕೂಲವಾಗಲಿದೆ ಎಂದಿದ್ದಾರೆ.
Leave a Comment