ಧಾರವಾಡ :- ಕೊರೊನಾ ಮಹಾಮಾರಿಯ ಹೊಡೆತಕ್ಕೆ ಸಿಲುಕಿ ನಲುಗುತ್ತಿರುವ ಧಾರವಾಡ ಜಿಲ್ಲೆಯಲ್ಲಿ ಸಾವಿರಕ್ಕೂ ಅಧಿಕ ಕೊರೊನಾ ಪ್ರಕರಣಗಳು ದಾಖಲಾಗಿದ್ದು, ಕೊರೊನಾ ನಿಯಂತ್ರಣಕ್ಕೆ ಸಿಗದೆ ಉಲ್ಬಣಗೊಳ್ಳುತ್ತಿರುವುದರಿಂದ ಧಾರವಾಡ ಜಿಲ್ಲೆಯನ್ನು ಲಾಕ್ ಡೌನ್ ಮಾಡಲಾಗುತ್ತದೆ ಎಂದು ಹೇಳಲಾಗುತ್ತಿತ್ತು ಸೋಮವಾರ ಇದಕ್ಕೆ ಜಿಲ್ಲಾ ಉಸ್ತುವಾರಿ ಸಚಿವರಾದ ಜಗದೀಶ್ ಶೆಟ್ಟರ್ ಸುದ್ದಿಗೋಷ್ಟಿ ನಡೆಸಿ ಸ್ಪಷ್ಟಪಡಿಸಿದ್ದಾರೆ.
ಧಾರವಾಡ ಜಿಲ್ಲೆಯಾದ್ಯಂತ ಜುಲೈ 15 ರ ಬೆಳಿಗ್ಗೆ 10 ಗಂಟೆಯಿಂದ , ಜುಲೈ 24 ರ ರಾತ್ರಿ 8 ಗಂಟೆಯವರೆಗೆ ಲಾಕ್ ಡೌನ್ ಮಾಡಲಾಗುತ್ತಿದೆ ಎಂದವರು ತಿಳಿಸಿದರು.
ನಿರ್ಮಾಣ ಕಾಮಗಾರಿ, ಕೈಗಾರಿಕೆ ಚಟುವಟಿಕೆಗಳು, ಜೀವನಾವಶ್ಯಕ ವಸ್ತುಗಳ ಪೂರೈಕೆ ಗೆ ವಿನಾಯಿತಿ ಇದೆ ಎಂದು ಶೆಟ್ಟರ್ ತಿಳಿಸಿದರು.
ಸೋಮವಾರ ಸಾಯಂಕಾಲ ಧಾರವಾಡ ಜಿಲ್ಲಾಧಿಕಾರಿಗಳು ಅಧಿಕೃತವಾಗಿ ಲಾಕ್ ಡೌನ್ ಆದೇಶದ ಪರಿಷ್ಕೃತ ನಿಯಮಗಳ ಬಗ್ಗೆ ವಿವರವಾಗಿ ಆದೇಶ ಹೊರಡಿಸಲಿದ್ದಾರೆ ಎನ್ನಲಾಗಿದೆ.
Leave a Comment