ಹಳಿಯಾಳ :- ಕೊಟ್ಯಂತರ ರೂ. ವೆಚ್ಚದಲ್ಲಿ ಹಳಿಯಾಳ ಎಪಿಎಮ್ಸಿಯ ಅಭಿವೃದ್ದಿ ಕಾಮಗಾರಿಗಳು ನಡೆಸಲಾಗಿದೆ, ಇಲ್ಲಿ ಆಗಮಿಸುವ ರೈತರಿಗೆ ಎಲ್ಲ ಬಗೆಯ ಮೂಲಭೂತ ಸೌರ್ಯಗಳನ್ನು ಕಲ್ಪಿಸಲಾಗಿದೆ ಎಂದು ರಾಜ್ಯ ಕೃಷಿ ಮಾರುಕಟ್ಟೆ ಮಹಾಮಂಡಳಿ ನಿರ್ದೇಶಕರು ಮತ್ತು ಹಳಿಯಾಳ ಎಪಿಎಮ್ಸಿ ಅಧ್ಯಕ್ಷ ಶ್ರೀನಿವಾಸ ಘೋಟ್ನೇಕರ ಹೇಳಿದರು.

ಹಳಿಯಾಳದ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ೨೦೧೮-೧೯ನೇ ಸಾಲಿನ ವಾರ್ಷಿಕ ಕ್ರಿಯಾ ಯೋಜನೆಯಡಿ ಮುಖ್ಯ ಮಾರುಕಟ್ಟೆ ಪ್ರಾಂಗಣದಲ್ಲಿ ರೈತರು ಗೋವಿನ ಜೋಳ ಸೇರಿದಂತೆ ಇನ್ನಿತರ ಬೆಳೆಗಳನ್ನು ಮಳೆ, ಬಿಸಿಲಿನಿಂದ ರಕ್ಷಿಸಿಕೊಳ್ಳಲು ಮತ್ತು ಒಣಗಿಸಿ ಮಾರಾಟ ಮಾಡಲು ತಲಾ ೧೫ ಲಕ್ಷ ರೂ ವೆಚ್ಚದಲ್ಲಿ ನಿರ್ಮಿಸಲು ಉದ್ದೇಶಿಸಿರುವ ನಾಲ್ಕೂ ನೂತನ ಶೆಲ್ಟರ್ಗಳ ಕಾಮಗಾರಿಯ ಭೂಮಿ ಪೂಜೆ ನೆರವೆರಿಸಿ ಮಾತನಾಡಿದರು.
ಎಪಿಎಮ್ಸಿಗೆ ಬರುವ ರೈತರು ಮತ್ತು ವ್ಯಾಪಾರಿಗಳಿಗೆ ಮಾಸ್ಕ್, ಸ್ಯಾನಿಟೇಜರ್ ಹಾಗೂ ಕಾರ್ಮಿಕರಿಗೆ ಆಹಾರದ ಕಿಟ್ಗಳನ್ನು ವಿತರಿಸಲಾಗಿದೆ ಎಂದು ತಿಳಿಸಿದರು.

ವಿಧಾನ ಪರಿಷತ್ ಸದಸ್ಯ ಎಸ್.ಎಲ್.ಘೋಟ್ನೆಕರ ಮಾತನಾಡಿ ತಾಲೂಕಿನಲ್ಲಿ ರೈತರು ಬೆಳೆದ ಬೆಳೆಗಳಿಗೆ ಉತ್ತಮ ಬೆಲೆ ನೀಡಲು ಹಳಿಯಾಳ ಎಪಿಎಮ್ಸಿ ಸಿದ್ದವಿದೆ, ಅಲ್ಲದೇ ಸುಮಾರು ೧ ಕೋಟಿ ರೂ. ವೆಚ್ಚದಲ್ಲಿ ಶೀಥಿಲಿಕರಣ ಘಟಕ ಆರಂಭಿಸುವ ಬಗ್ಗೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದ್ದು ಇದು ಮಂಜೂರಿಯಾದರೇ ರೈತರು ವಾಣಿಜ್ಯ ಬೆಳೆಗಳನ್ನು ಸಹ ಸಾಕಷ್ಟು ಪ್ರಮಾಣದಲ್ಲಿ ಬೆಳೆಯಲು ತುಂಬಾ ಅನುಕೂಲವಾಗಲಿದೆ ಎಂದರು.
ಕರ್ಯಕ್ರಮದಲ್ಲಿ ಎಪಿಎಮ್ಸಿ ಉಪಾಧ್ಯಕ್ಷ ಸಂತೋಷ ಮಿರಾಶಿ, ಪುರಸಭೆ ಸದಸ್ಯ ರುದ್ರಪ್ಪ ಕೇಸರೆಕರ, ಕಾರ್ಯದರ್ಶಿ ಸುಮಿತ್ರಾ ಹಾವಣ್ಣವರ, ಕೆ.ಬಿ. ದೊಡ್ಡಮನಿ, ಕೇದಾರಿ ಸಾಂಬ್ರಾಣಿಕರ, ನಾಗರಾಜ ಪಾಟೀಲ್ ಇದ್ದರು.

Leave a Comment