ಚೆನ್ನೈ: ಖ್ಯಾತ ಗಾಯಕ ಎಸ್.ಪಿ.ಬಾಲಸುಬ್ರಹ್ಮಣ್ಯಂ ಆರೋಗ್ಯದಲ್ಲಿ ಸ್ವಲ್ಪವೂ ಸುಧಾರಣೆ ಕಂಡುಬಂದಿಲ್ಲ. ಗಂಭೀರ ಸ್ಥಿತಿಯಲ್ಲಿಯೇ ಮುಂದುವರಿದಿದೆ ಎಂದು ಅವರಿಗೆ ಚಿಕಿತ್ಸೆ ನೀಡುತ್ತಿರುವ ಚೆನ್ನೈನ ಎಂಜಿಎಂ ಆಸ್ಪತ್ರೆ ಹೆಲ್ತ್ ಬುಲೆಟಿನ್ನಲ್ಲಿ ತಿಳಿಸಿದೆ. ಎಸ್ಪಿಬಿ ಅವರು ಇನ್ನೂ ವೆಂಟಿಲೇಟರ್ ಸಹಾಯದಲ್ಲಿಯೇ ಇದ್ದಾರೆ. ತಜ್ಞರ ತಂಡ ಅವರಿಗೆ ಚಿಕಿತ್ಸೆ ನೀಡುತ್ತಿದೆ ಎಂದು ಮಾಹಿತಿ ನೀಡಿದೆ.ದೇಶದ ಕೆಲವು ತಜ್ಞರು ಮಾತ್ರವಲ್ಲ,

ವಿದೇಶಗಳ ಖ್ಯಾತ ತಜ್ಞ ವೈದ್ಯರ ಸಲಹೆಯನ್ನೂ ಪಡೆದು ಎಸ್ಪಿ ಬಾಲಸುಬ್ರಹ್ಮಣ್ಯಂ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಆದರೆ ಅವರಲ್ಲಿ ಕಿಂಚಿತ್ತೂ ಸುಧಾರಣೆ ಕಾಣುತ್ತಿಲ್ಲ ಎಂದು ಹೆಲ್ತ್ಬುಲೆಟಿನ್ನಲ್ಲಿ ಉಲ್ಲೇಖಿಸಿದೆ.ಈ ಮಧ್ಯೆ ದೇಶಾದ್ಯಂತ ಅನೇಕ ಅಭಿಮಾನಿಗಳು ಎಸ್ಪಿಬಿ ಆರೋಗ್ಯ ಸುಧಾರಣೆಗಾಗಿ ಪ್ರಾರ್ಥಿಸುತ್ತಿದ್ದಾರೆ.
Leave a Comment