ಹುಬ್ಬಳ್ಳಿ :- ಹುಬ್ಬಳ್ಳಿಯ ಟ್ರಾಫಿಕ್ ಐಲ್ಯಾಂಡ್ ಚೆನ್ನಮ್ಮ_ವೃತ್ತದಲ್ಲಿ 300 ಕೋಟಿ ರೂಪಾಯಿ ವೆಚ್ಚದಲ್ಲಿ ಫ್ಲೈಓವರ್ ನಿರ್ಮಿಸುವುದಕ್ಕೆ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರು ಮಾಹಿತಿ ನೀಡಿದ್ದಾರೆ.ಈ ಕುರಿತು ತಮ್ಮ ಸಾಮಾಜಿಕ ಜಾಲತಾಣಗಳ ಖಾತೆಯಲ್ಲಿ ಉಲ್ಲೇಖಿಸಿರುವ ಅವರು ಹುಬ್ಬಳ್ಳಿ ಜನರ ಬಹುದಿನದ ಬೇಡಿಕೆಯಾಗಿದ್ದ ಚೆನ್ನಮ್ಮ ವೃತ್ತದಲ್ಲಿ ಫ್ಲೈ ಓವರ್ ನಿರ್ಮಾಣ ಈಗ ಈಡೇರಿದೆ.ಈ ಭಾಗದ ಜನರ ಬೇಡಿಕೆಗೆ ಶೀಘ್ರದಲ್ಲಿ ಸ್ಪಂದಿಸಿ, ಈ ಯೋಜನೆಗೆ ಅನುಮೋದನೆ ನೀಡಿದ್ದಕ್ಕಾಗಿ ನಾನು ಈ ಸಂದರ್ಭದಲ್ಲಿ ಜನತೆಯ ಪರವಾಗಿ ಕೇಂದ್ರ ಸರ್ಕಾರಕ್ಕೆ ಹಾಗೂ ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಸರ್ಕಾರ ಸಚಿವರಾದ ನಿತಿನ್ ಗಡ್ಕರಿ ಅವರಿಗೆ ಹಾರ್ದಿಕ ಅಭಿನಂದನೆಗಳನ್ನು ಸಲ್ಲಿಸಿ ಧನ್ಯವಾದ ಹೇಳಬಯಸುತ್ತೇನೆ ಎಂದಿದ್ದಾರೆ.
Leave a Comment