ಕಾರವಾರ: ಕ್ಷೇತ್ರದ ಅಭಿವೃದ್ಧಿಗೆ ಪ್ರತಿಯೊಬ್ಬ ನಾಗರಿಕ ಮತ್ತು ಜನ ಪ್ರತಿನಿಧಿಗಳು ಬೆಂಬಲಿಸಬೇಕು ಎಂದು ಕಾರವಾರ ಅಂಕೋಲಾ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀಮತಿ ರೂಪಾಲಿ ಎಸ್. ನಾಯ್ಕ ಹೇಳಿದರು.
ತಾಲೂಕಿನ ಆಮದಳ್ಳಿ ಗ್ರಾಮಪಂಚಾಯ್ತಿ ವ್ಯಾಪ್ತಿಯಲ್ಲಿ 2017-18ನೇ ಸಾಲಿನ ಮುಖ್ಯಮಂತ್ರಿ ಗ್ರಾಮ ವಿಕಾಸ ಯೋಜನೆಯಡಿ ಮಂಜೂರಾದ ಕಾಮಗಾರಿಗಳಿಗೆ ಚಾಲನೆ ನೀಡಿ ಅವರು ಮಾತನಾಡಿದರು.

ಅಭಿವೃದ್ಧಿ ಎಂದರೆ ಕೇವಲ ರಸ್ತೆ ಚರಂಡಿ ನಿರ್ಮಾಣ ಅμÉ್ಟೀ ಅಲ್ಲ. ಕೈಗಾರಿಕೆಗಳ ಸ್ಥಾಪನೆ, ಬಂದರು ನಿರ್ಮಾಣ ಮಾಡುವ ಮೂಲಕ ಉದ್ಯೋಗ ಸೃಷ್ಟಿ ಮಾಡಿ ಆರ್ಥಿಕವಾಗಿ ಸದೃಢವಾಗುವುದು ಆಗಿದೆ. ಕ್ಷೇತ್ರ ಅಭಿವೃದ್ಧಿಯಾದರೆ ಇತಿಹಾಸದ ಪುಟದಲ್ಲಿ ಕಾರವಾರ-ಅಂಕೋಲಾ ವಿಧಾನಸಭಾ ಕ್ಷೇತ್ರದ ಹೆಸರು ನಮೂದಿಸಲಾಗುತ್ತದೆ. ಸ್ಥಳೀಯ ಯುವಕ-ಯುವತಿಯರು ಕಡಿಮೆ ಸಂಬಳಕ್ಕಾಗಿ ಬೇರೆ ಬೇರೆ ಊರುಗಳಿಗೆ ಹೋಗುತ್ತಿದ್ದರೆ. ಅದಕ್ಕಾಗಿ ಈ ಭಾಗದಲ್ಲಿ ಉದ್ಯೋಗ ಸೃಷ್ಟಿಗೆ ಕೈಗಾರಿಕೆ ಸ್ಥಾಪನೆ ಅವಶ್ಯಕವಾಗಿದೆ ಎಂದರು.
ಸರ್ವಿಸ ರಸ್ತೆ ನಿರ್ಮಿಸುವಂತೆ ಮನವಿ:
ಆಮದಳ್ಳಿ ಗ್ರಾಮದ ವ್ಯಾಪ್ತಿಯಲ್ಲಿ ಐ.ಆರ್.ಬಿ. ವತಿಯಿಂದ ಸರ್ವಿಸ್ ರಸ್ತೆ ನಿರ್ಮಿಸಬೇಕು ಎಂದು ಗ್ರಾಮಸ್ಥರು ಶಾಸಕರಿಗೆ ಮನವಿ ನೀಡಿದರು.
ಈ ಸಂದರ್ಭದಲ್ಲಿ ಗ್ರಾಮ ಪಂಚಾಯತಿ ಮುಖ್ಯ ಆಡಳಿತಾಧಿಕಾರಿ, ಪಿಡಿಒ, ಗ್ರಾಮದ ಮುಖಂಡರು, ಮುಖ್ಯಸ್ಥರು ಉಪಸ್ಥಿತರಿದ್ದರು.


Leave a Comment