ಭಟ್ಕಳ ತಾಲೂಕಿನ ಅಳ್ವೆಕೋಡಿ, ತೆಂಗಿನಗುಂಡಿ, ಬಂದರ್ ಬ್ರೇಕ್ ವಾಟರ್ ಕಾಮಗಾರಿಗೆ ಸಂಸದ ಅನಂತಕುಮಾರ ಹೆಗಡೆ ಅವರ ಸಹಕಾರದಿಂದ ಕೇಂದ್ರ ಸರ್ಕಾರದ ಸಹಭಾಗಿತ್ವದಲ್ಲಿ 86 ಕೋಟಿ ರೂಪಾಯಿ ವೆಚ್ಚದಲ್ಲಿ ಕಾಮಗಾರಿಯು ನಡೆಯುತ್ತಿದ್ದು ಕಳೆದ ಬಜೆಟ್ ಅಧಿವೇಶನದಲ್ಲಿ ಅಳ್ವೆಕೋಡಿ ಬಂದರ್ ಡ್ರಜ್ಜಿಂಗ್ ಕಾಮಗಾರಿಗೆ 5 ಕೋಟಿ ರೂಪಾಯಿ ಅನುದಾನವನ್ನು ಮಂಜೂರು ಮಾಡಲಾಗಿದೆ ಎಂದು ಶಾಸಕ ಸುನೀಲ ನಾಯ್ಕ ಅಭಿಪ್ರಾಯಪಟ್ಟರು 86 ಕೋಟಿ ರೂಪಾಯಿ ವೆಚ್ಚದಲ್ಲಿ ನಡೆಯುತ್ತಿರುವ ಬ್ರೇಕ್ ವಾಟರ್ ಕಾಮಗಾರಿಯು ಸಂಪೂರ್ಣಗೊಳ್ಳದೆ ಡ್ರಜ್ಜಿಂಗ್ ಕಾಮಗಾರಿ ಪ್ರಾರಂಭಿಸುವುದು ಕಷ್ಟಸಾಧ್ಯವಾಗಿರುವುದರಿಂದ ಕಾಮಗಾರಿಯನ್ನು ಶೀಘ್ರ ಪ್ರಾರಂಭಿಸುಂವಂತೆ ಶ್ರೀ ದುರ್ಗಾಪರಮೇಶ್ವರಿ ಟ್ರಾವೆಲ್ ಬೋಟ್ ವತಿಯಿಂದ ಹಾಗೂ ತೆಂಗಿನಗುಂಡಿ ಮೀನುಗಾರರ ಒಕ್ಕೂಟದ ವತಿಯಿಂದ ಮನವಿ ಮಾಡಿದರು.
ಕಾಮಗಾರಿಯನ್ನು ಶೀಘ್ರ ಪ್ರಾರಂಭಿಸಲು ಅಗತ್ಯ ಕ್ರಮ ಕೈಗೊಂಡ ಬಗ್ಗೆ ಮೀನುಗಾರರಿಗೆ ತಿಳಿಸಿ ಮೀನುಗಾರರ ಒಕ್ಕೂಟದ ಸನ್ಮಾನಿಸಿ ಗೌರವಿಸಲಾಯಿತು.
Leave a Comment