ಕಾರವಾರ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ದಲಿತ ರಕ್ಷಣಾ ವೇದಿಕೆಯವರು ಜಿಲ್ಲಾಧಿಕಾರಿ ಕಚೇರಿ ಮೂಲಕ ಇಂದು ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು. ಉತ್ತರ ಕನ್ನಡ ಜಿಲ್ಲೆಯಲ್ಲಿ ಅನೇಕ ರೈತರು ಬಗರ ಹಕ್ಕುಂ ಮತ್ತು ಅರಣ್ಯ ಅತಿಕ್ರಮಣ ರೈತಾಪಿ ಮಾಡಿಕೊಂಡವರಿಗೆ ಹಕ್ಕು ಪತ್ರಗಳನ್ನು ವಿತರಿಸಬೇಕು ಎಂದು ಆಗ್ರಹಿಸಿದರು. ರಾಜ್ಯದಲ್ಲಿ ರೈತ ಬೆಳೆದ ಬೆಳೆಗೆ ನಿಗದಿತ ಬೆಂಬಲ ಬೆಲೆಯನ್ನು ನಿಗದಿ ಮಾಡಬೇಕು. ಸೂಕ್ತ ಮಾರುಕಟ್ಟೆ ವ್ಯವಸ್ಥೆ ಕಲ್ಪಿಸಬೇಕು. ಸರ್ಕಾರವೇ ಬೆಳೆಗಳನ್ನು ಖರಿದಿಸುವಂತೆ ಆಗಬೇಕು ಎಂದು ಆಗ್ರಹಿಸಿದರು. ಇದರೊಂದಿಗೆ ಎಲ್ಲಡೆ ಕಳಪೆ ಕಾಮಗಾರಿಗಳು ನಡೆಯುತ್ತಿದೆ. ಮಳೆಗಾಲದ ಅವದಿಯಲ್ಲಿ ಕಾಮಗಾರಿಯ ಗುಣಮಟ್ಟ ಬೆಳಕಿಗೆ ಬರುತ್ತಿದೆ. ಕಳಪೆ ಕಾಮಗಾರಿ ನಡೆಸಿದವರ ವಿರುದ್ದ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು. ತಮ್ಮ ಬೇಡಿಕೆ ಈಡೇರಿಸದಿದ್ದರೆ ಬೀದಿಗಿಳಿದು ಹೋರಾಟ ಮಾಡುವುದಾಗಿ ಎಚ್ಚರಿಸಿದರು. ಕದರವೇ ರಾಜ್ಯ ಸಂಚಾಲಕರು ಚಿದಾನಂದ ಎಚ್ ಹರಿಜನ ನೇತ್ರತ್ವದಲ್ಲಿ ಮನವಿ ಸಲ್ಲಿಸಲಾಯಿತು.

Leave a Comment