ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲಿ ಶನಿವಾರ 117 ಕೊರೊನಾ ಸೋಂಕಿತರು ಪತ್ತೆಯಾಗಿದ್ದಾರೆ ಎಂದು ಜಿಲ್ಲಾಡಳಿತ ಮಾಹಿತಿ ನೀಡಿದೆ.
ಹೀಗಾಗಿ ಜಿಲ್ಲೆಯ ಒಟ್ಟು ಕೊರೊನಾ ಸೋಂಕಿತರ ಸಂಖ್ಯೆ 6804ಕ್ಕೆ ಏರಿಕೆಯಾಗಿದೆ. ಇದರಲ್ಲಿ 4865 ಕೊರೊನಾ ಸೋಂಕಿತರು ಚಿಕಿತ್ಸೆ ಪಡೆದು ಗುಣಮುಖರಾಗಿದ್ದಾರೆ. ಶನಿವಾರ 86 ಜನ ಗುಣಮುಖರಾಗಿದ್ದಾರೆ. ಸಕ್ರಿಯರಾಗಿರುವ 1859 ಕೊರೊನಾ ಸೋಂಕಿತರ ಪೈಕಿ 1048 ಜನ ಅವರವರ ಮನೆಯಲ್ಲಿ ಹಾಗೂ 811 ಜನ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಶನಿವಾರ ಅಂಕೋಲಾದಲ್ಲಿ ಕೊರೊನಾ ಸೋಂಕಿತ ವ್ಯಕ್ತಿಯೊಬ್ಬರು ಸಾವನಪ್ಪಿದ್ದು, ಉತ್ತರ ಕನ್ನಡ ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಾವಿನ ಸಂಖ್ಯೆ 80ಕ್ಕೆ ಏರಿಕೆಯಾಗಿದೆ.
Leave a Comment