ಹೊನ್ನಾವರ: ಪ್ರತಿಭಾವಂತ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸಿ ಬೆಳೆಸಬೇಕು ಎಂದು ಕರಾಟೆ ಮತ್ತು ಸ್ಪೋಟ್ರ್ಸ್ ಸಂಸ್ಥೆಯ ಜಿಲ್ಲಾ ಗೌರವಾಧ್ಯಕ್ಷ ಜಯಂತ ಹರಿಕಾಂತ ಹೇಳಿದರು.
ಪಟ್ಟಣದ ಪ್ರಭಾತನಗರದ ಶ್ರೀ ಮೂಡಗಣಪತಿ ಸಭಾಭವನದಲ್ಲಿ ಕರ್ನಾಟಕ ರಾಜ್ಯ ಕರಾಟೆ ಮತ್ತು ಸ್ಪೋಟ್ರ್ಸ್ ಸಂಸ್ಥೆಯ ತಾಲೂಕು ಘಟಕದ ವತಿಯಿಂದ ಶುಕ್ರವಾರ ಎಸ್ಎಸ್ಎಲ್ಸಿಯಲ್ಲಿ ಶೇ. 98.72 ಫಲಿತಾಂಶ ಪಡೆದ ಅನನ್ಯ ಪ್ರಭು ಅವರನ್ನು ಸನ್ಮಾನಿಸಿ ಅವರು ಮಾತನಾಡಿದರು. ಜಿಲ್ಲೆಯಲ್ಲಿ ಕರಾಟೆ ಆಸಕ್ತರಿಗಾಗಿ ಘಟಕವನ್ನು ಹುಟ್ಟು ಹಾಕಲಾಗಿದ್ದು ವಿದ್ಯಾರ್ಥಿಗಳಿಗೆ ತರಬೇತಿ ನೀಡಲಾಗುತ್ತಿದೆ. ಎಲ್ಲ ರಂಗಗಳ ಮಕ್ಕಳನ್ನು ಪ್ರೋತ್ಸಾಹಿಸುವುದು ಸಂಸ್ಥೆಯ ಉದ್ದೇಶವಾಗಿದೆ ಎಂದರು.

ಕರ್ನಾಟಕ ರಾಜ್ಯ ಕರಾಟೆ ಮತ್ತು ಸ್ಪೋಟ್ರ್ಸ್ ಸಂಸ್ಥೆಯ ಜಿಲ್ಲಾ ಉಪಾಧ್ಯಕ್ಷ ಶ್ರೀಪಾದ ಮೇಸ್ತ, ಸಾಂಸ್ಕøತಿಕ ಕಾರ್ಯದರ್ಶಿ ಶಂಕರ ಮೇಸ್ತ, ತಾಲೂಕು ಘಟಕದ ಅಧ್ಯಕ್ಷ ಪ್ರಭಾಕರ ಗೌಡ ಹಾಗೂ ಕರಾಟೆ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
Leave a Comment