ಶಿರಸಿ: ಇಲ್ಲಿಯ ಪಂಡಿತ್ ಸಾರ್ವಜನಿಕ ಆಸ್ಪತ್ರೆಯಲ್ಲಿ ಅರಿವಳಿಕೆ ತಜ್ಞರಾಗಿ ಕಾರ್ಯ ನಿರ್ವಹಿಸುತ್ತಿದ್ದ ಡಾ ಬಸವನಗೌಡ( 61) ಭಾನುವಾರ ಮುಂಜಾನೆ 1.30ಕ್ಕೆ ನಿಧನರಾಗಿದ್ದಾರೆ ಎಂಬ ಮಾಹಿತಿ ಲಭಿಸಿದೆ.
ಮೂಲತಃ ದಾವಣಗೆರೆಯವರಾದ ಅವರು, ತಮ್ಮ ಸೇವಾ ನಿವೃತ್ತಿಯ ನಂತರದಲ್ಲಿಯೂ ಸಹ ಶಿರಸಿಯ ಸರಕಾರಿ ಆಸ್ಪತ್ರೆಯಲ್ಲಿ ಅರಿವಳಿಕೆ ತಜ್ಞರಾಗಿ ಕೆಲವು ತಿಂಗಳುಗಳಿಂದ ಕಾರ್ಯ ನಿರ್ವಹಿಸುತ್ತಿದ್ದರು.
ಕಳೆದ ಆ. 25 ರಂದು ಅವರಿಗೆ ಕೊರೊನಾ ಪಾಸಿಟಿವ್ ದೃಢವಾಗಿತ್ತು. ನಂತರದಲ್ಲಿ ಚಿಕಿತ್ಸೆಗಾಗಿ ಅವರು ದಾವಣಗೆರೆಗೆ ತೆರಳಿದ್ದರು. ಕಳೆದೆರಡು ದಿನಗಳಿಂದ ವೆಂಟಿಲೇಟರ್ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು, ಭಾನುವಾರ ಬೆಳಗಿನ ಜಾವ ಕೊನೆಯುಸಿರೆಳೆದಿದ್ದಾರೆ.

Leave a Comment