ಕುಮಟಾ: ಶಾಸಕ ದಿನಕರ ಶೆಟ್ಟಿ ಅವರಿಗೆ ಕೋವಿಡ್ ಸೋಂಕು ದೃಢಪಟ್ಟಿದೆ.ರೋಗ ಲಕ್ಷಣ ರಹಿತವಾಗಿರುವ ಅವರು ತಾಲೂಕು ಆಸ್ಪತ್ರೆಯಲ್ಲಿ ರ್ಯಾಪಿಡ್ ಆ್ಯಂಟಿಜೆನ್ ಪರೀಕ್ಷೆಗೆ ಒಳಗಾಗಿದ್ದರು. ಈ ವೇಳೆ ಸೋಂಕು ದೃಢಪಟ್ಟಿದೆ. ಅವರ ಕುಟುಂಬದ ಆಪ್ತರೊಬ್ಬರಿಗೆ ಇತ್ತೀಚೆಗೆ ಸೋಂಕು ದೃಢಪಟ್ಟಿತ್ತು. ಹೀಗಾಗಿ ಅವರಿಂದ ಸೋಂಕು ತಗುಲಿದೆ ಎನ್ನಲಾಗಿದೆ. ಸದ್ಯ ಶಾಸಕ ಶೆಟ್ಟಿ ತಾಲೂಕು ಆಸ್ಪತ್ರೆಗೆ ಭೇಟಿ ನೀಡಿ ಮನೆಗೆ ಮರಳಿದ್ದು, ಮಂಗಳೂರು ಆಸ್ಪತ್ರೆಗೆ ದಾಖಲಾಗುವ ಸಾಧ್ಯತೆ ಇದೆ ಎನ್ನಲಾಗಿದೆ. ಅವರ ಪತ್ನಿ, ಮಕ್ಕಳ ಪರೀಕ್ಷಾ ವರದಿ ನೆಗೆಟಿವ್ ಬಂದಿದೆ.
Leave a Comment