ಹೊನ್ನಾವರ – ಕಳೆದ ಸಾಲಿನ ಎಸ್.ಎಸ್.ಎಲ್.ಸಿ ಮತ್ತು ದ್ವಿತಿಯ ಪಿ.ಯು.ಸಿಯಲ್ಲಿ ಅತ್ಯುತ್ತಮ ಸಾಧನೆ ಮಾಡಿದ ತಾಲೂಕಿನ ನಾಮಧಾರಿ ಸಮಾಜದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರಕ್ಕಾಗಿ ತಾಲೂಕಾ ನಾಮಧಾರಿ ಅಭಿವೃದ್ಧಿ ಸಂಘದವರು ಅರ್ಜಿ ಆಹ್ವಾನಿಸಿದ್ದಾರೆ.
ಎಸ್.ಎಸ್.ಎಲ್.ಸಿಯಲ್ಲಿ ಶೇಕಡಾ 90 ಮತ್ತು ದ್ವಿತಿಯ ಪಿ.ಯು.ಸಿಯಲ್ಲಿ ಶೇಕಡಾ 85 ಅಥವಾ ಅದಕ್ಕಿಂತ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳು ಪ್ರತಿಭಾ ಪುರಸ್ಕಾರ ಪಡೆಯಲು ಅರ್ಹರಾಗಿರುತ್ತಾರೆ. ಅರ್ಜಿ ನಮೂನೆ ಹೊನ್ನಾವರದ ನಾಮಧಾರಿ ವಿದ್ಯಾರ್ಥಿ ನಿಲಯದಲ್ಲಿ ಹಾಗೂ ಸಂಘದ ಆಡಳಿತ ಕಮಿಟಿ ಸದಸ್ಯರಲ್ಲಿಯೂ ಲಭ್ಯವಿರುವುದಾಗಿ ತಾಲೂಕಾ ನಾಮಧಾರಿ ಅಭಿವೃದ್ಧಿ ಸಂಘದ ಪ್ರಧಾನ ಕಾರ್ಯದರ್ಶಿ ವಾಮನ ನಾಯ್ಕ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 30-09-2020.
Leave a Comment