ಹಳಿಯಾಳ:- ಶಾಂತಿ ಮತ್ತು ನೆಮ್ಮದಿಗೆ ಹೆಸರಾದ ಕರ್ನಾಟಕ ರಾಜ್ಯದಿಂದ ಡ್ರಗ್ಸ್ ದಂಧೆಯನ್ನು ಸಂಪೂರ್ಣವಾಗಿ ಮಟ್ಟಹಾಕಬೇಕೆಂದು ಆಗ್ರಹಿಸಿ ಬಿಜೆಪಿ ಪಕ್ಷದ ಯುವಮೋರ್ಚಾ ಘಟಕದಿಂದ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.
ಇಲ್ಲಿಯ ಮಿನಿ ವಿಧಾಸೌಧಕ್ಕೆ ಆಗಮಿಸಿ ತಹಶೀಲ್ದಾರ್ ಅವರಿಗೆ ಮನವಿ ಪತ್ರ ಸಲ್ಲಿಸಲಾಯಿತು. ಸಲ್ಲಿಸಿದ ಮನವಿಯಲ್ಲಿ ಕಳೆದ ಕೆಲವು ದಿನಗಳಿಂದ ರಾಜ್ಯದ ನೆಮ್ಮದಿ ಮತ್ತು ಹೆಸರು ಕೆಡಿಸಿದ ಮಾದಕ ವಸ್ತು ಮಾರಾಟ ಜಾಲ ಮತ್ತು ಸೇವನೆಯ ವಿರುದ್ದ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ, ಗೃಹ ಸಚಿವಾಲಯ ಮತ್ತು ಪೋಲಿಸ್ ಇಲಾಖೆ ಅತ್ಯಂತ ಕಟ್ಟುನಿಟ್ಟಾದ ಕ್ರಮ ಜರುಗಿಸಿದ್ದಕ್ಕಾಗಿ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.

ಇದೇ ರೀತಿ ತಮ್ಮ ಕಠಿಣ ಕಾರ್ಯ ಮುಂದುವರೆಸಿ ಈ ಮಾಫಿಯಾದಲ್ಲಿ ಭಾಗಿಯಾಗಿರುವವರು ಯಾರೇ ಆಗಿದ್ದರೂ ಹಾಗು ಯಾವುದೇ ಒತ್ತಡ, ಪ್ರಭಾವಕ್ಕೆ ಮಣಿಯದೇ ನಿಷ್ಪಕ್ಷಪಾತವಾಗಿ ತನಿಖೆ ನಡೆಸಿ ಕಠಿಣ ಕ್ರಮ ಜರುಗಿಸಬೇಕೆಂದು ಆಗ್ರಹಿಸಲಾಗಿದೆ.
ಡ್ರಗ್ಸ್ ಮುಕ್ತ ಕರ್ನಾಟಕವಾಗಬೇಕೆಂದು ಬಿಜೆಪಿ ಯುವಮೋರ್ಚಾ ಘಟಕ ಕೂಡ ಜನಜಾಗೃತಿ ಆರಂಭಿಸಿದ್ದು ಸರ್ಕಾರದ ಎಲ್ಲ ಕಠಿಣ ನಿರ್ಧಾರಗಳಿಗೆ ಬೆಂಬಲಿಸುತ್ತದೆ ಎಂದು ಹೇಳಲಾಗಿದೆ.
ಮನವಿ ಸಲ್ಲಿಸುವಾಗ ಮಾಜಿ ಶಾಸಕ ಸುನೀಲ್ ಹೆಗಡೆ, ತಾಲೂಕಾ ಬಿಜೆಪಿ ಅಧ್ಯಕ್ಷ ಗಣಪತಿ ಕರಂಜೆಕರ, ಯುವಮೋರ್ಚಾ ಅಧ್ಯಕ್ಷ ಸಿದ್ದು ಶೇಟ್ಟಿ, ಪುರಸಭೆ ಸದಸ್ಯ ಚಂದ್ರು ಕಮ್ಮಾರ, ಪ್ರಮುಖರಾದ ಅನಿಲ ಮುತ್ನಾಳ, ಯಲ್ಲಪ್ಪಾ ಹೆಳವರ, ರಾಕೇಶ ಬಾಂದೊಡಕರ, ರಾಮಚಂದ್ರ ಸುರೋಜಿ, ಪವನ ತಲ್ಲೂರ, ರಘುನಾಥ ಪೊಪಳೆ ಇತರರು ಇದ್ದರು.
Leave a Comment