ಹಳಿಯಾಳ:- ತನ್ನ ಮನೆಯ ಹಿತ್ತಲಿನಲ್ಲಿ ಗಾಂಜಾ ಸಸಿಗಳನ್ನು ಬೆಳೆದು ಮಾರಾಟ ಮಾಡುತ್ತಿದ್ದ ವ್ಯಕ್ತಿಯ ಮನೆಯ ಮೇಲೆ ದಾಳಿ ನಡೆಸಿದ ಹಳಿಯಾಳ ಪೋಲಿಸರು 1 ಕೆಜಿ 15 ಗ್ರಾಂ ನಷ್ಟು 11 ಹಸಿ ಗಾಂಜಾ ಗಿಡಗಳನ್ನು ವಶಪಡಿಸಿಕೊಂಡು ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಖಚಿತ ಮಾಹಿತಿ ಮೆರೆಗೆ ಸಿಪಿಐ ಮೋತಿಲಾಲ್ ಪವಾರ ಅವರ ನೇತೃತ್ವದಲ್ಲಿ ತಾಲೂಕಿನ ಗುಂಡೊಳ್ಳಿ ಗ್ರಾಮದ ವಿಠ್ಠಲ ಕರಿಯಪ್ಪ ಹುರ್ಕೆಗೌಡ ಎನ್ನುವವರ ಮನೆಯ ಮೇಲೆ ದಾಳಿ ನಡೆಸಿ ಮನೆಯ ಹಿತ್ತಲಿನಲ್ಲಿ ಬೆಳೆದಿದ್ದ ಗಾಂಜಾ ಸಸಿಗಳನ್ನು ವಶಪಡಿಸಿಕೊಂಡಿದ್ದು ಇದರ ಸದ್ಯದ ಬೆಲೆ 1000 ರೂ. ಆಗಿದೆ ಎಂದು ಪೋಲಿಸರು ತಿಳಿಸಿದ್ದಾರೆ.
ದಾಳಿಯಲ್ಲಿ ತಹಶೀಲ್ದಾರ್ ವಿದ್ಯಾಧರ ಗುಳಗುಳೆ, ಪಿಎಸ್ಐ ಯಲ್ಲಾಲಿಂಗ ಕುನ್ನೂರು ಇದ್ದರು. ಎಸ್ಪಿ ಶಿವಪ್ರಕಾಶ ದೇವರಾಜು, ಎಎಸ್ಪಿ ಭದ್ರಿನಾಥ, ಡಿವೈಎಸ್ಪಿ ಶಿವಾನಂದ ಚಲವಾದಿ ಅವರ ಮಾರ್ಗದರ್ಶನದಲ್ಲಿ ನಡೆದ ಯಶಸ್ವಿ ಕಾರ್ಯಾಚರಣೆ ಇದಾಗಿದ್ದು ಪೋಲಿಸರ ಕಾರ್ಯಕ್ಕೆ ಎಸ್ಪಿ ಶಿವಪ್ರಕಾಶ ಅವರು ಪ್ರಶಂಸೆ ವ್ಯಕ್ತಪಡಿಸಿದ್ದು ಸ್ಥಳೀಯವಾಗಿ ಗಾಂಜಾ ಬೆಳೆಸುವುದು ಮತ್ತು ಮಾರಾಟಕ್ಕೆ ಸಂಪೂರ್ಣ ಬ್ರೇಕ್ ಹಾಕುವಂತೆ ಆದೇಶಿಸಿದ್ದು ಸ್ಥಳೀಯವಾಗಿ ಸಾರ್ವಜನೀಕರು ಮಾಹಿತಿ ನೀಡಿ ಗಾಂಜಾ ಜಾಲ ಪತ್ತೆಗಾಗಿ ಸಹಕರಿಸುವಂತೆ ಮನವಿ ಮಾಡಿದ್ದಾರೆ.
Leave a Comment