ಬೆಂಗಳೂರು: ರಾಜ್ಯಸಭೆ ಸದಸ್ಯ ಅಶೋಕ್ ಗಸ್ತಿ (55) ಅವರು ವಿಧಿವಶರಾಗಿದ್ದಾರೆ ಅಂತಾ ವರದಿಯಾಗಿದೆ. ಕೊರೊನಾ_ಸೋಂಕಿನಿಂದ_ಬಳಲುತ್ತಿದ್ದ ಅವರು, ಇಂದು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.ರಾಯಚೂರಿನಲ್ಲಿ ವಕೀಲ ವೃತ್ತಿ ಆರಂಭಿಸಿದ್ದ ಅಶೋಕ್ ಗಸ್ತಿ ಅವರು ಆರ್‌ಎಸ್‌ಎಸ್ ಹಾಗು ಬಿಜೆಪಿಯಲ್ಲಿ ಸಕ್ರಿಯರಾಗಿದ್ದರು. ಸವಿತಾ ಸಮಾಜಕ್ಕೆ ಸೇರಿದ್ದ ಅವರು, ಓಬಿಸಿ ಸೆಲ್‌ನ ಮಾಜಿ ಕಾರ್ಯದರ್ಶಿಗಳಾಗಿ ಸೇವೆ ಸಲ್ಲಿಸಿದ್ದರು. ಬಳ್ಳಾರಿ ಕೊಪ್ಪಳ ಹಾಗು ರಾಯಚೂರಿನಲ್ಲಿ ಪಕ್ಷದ ಉಸ್ತುವಾರಿ ಆಗಿಯೂ ಕಾರ್ಯನಿರ್ವಹಿಸಿದ್ದರು.ಇನ್ನು ರಾಜ್ಯ ಹಿಂದುಳಿದ ವರ್ಗದ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿಯೂ ಗಸ್ತಿ ಕಾರ್ಯನಿರ್ವಹಿಸಿದ್ದರು. ಇತ್ತೀಚೆಗಷ್ಟೇ ಅಶೋಕ್ ಗಸ್ತಿ ಅವರು ರಾಜ್ಯಸಭೆಗೆ ಆಯ್ಕೆ ಆಗಿದ್ದರು. ಜುಲೈ 22 ರಂದು ರಾಜ್ಯಸಭಾ ಸದಸ್ಯರಾಗಿ ಕನ್ನಡದಲ್ಲಿಯೇ ಪ್ರಮಾಣವಚ ಸ್ವೀಕಾರ ಮಾಡಿದ್ದರು.

Leave a Comment