ಹೊನ್ನಾವರ – ಕೆ.ಇ.ಬಿ ಪಿಂಚಣಿದಾರರ ಸಂಘದ ಪ್ರಾದೇಶಿಕ ಸಮಿತಿಯ ಅಧ್ಯಕ್ಷರಾದ ಅಬ್ದುಲ್ಲ ಸಮ್ಮದ(65) ತೀವ್ರ ಹೃದಯಾಘಾತದಿಂದ ಮಂಗಳೂರಿನ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
ಅವರು ಹೊನ್ನಾವರ ಹೆಸ್ಕಾಂ ಉಪವಿಭಾಗದಲ್ಲಿ ಮೆಕ್ಯಾನಿಕ್ ಆಗಿ ನಿವೃತ್ತರಾದ ನಂತರ ಹಲವು ಸಂಘಟನೆಯಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದರು.ಕೆ.ಇ.ಬಿ. ಪಿಂಚಣಿದಾರರ ಸಂಘದ ಅಧ್ಯಕ್ಷರಾಗಿ ಹೊನ್ನಾವರ, ಕುಮಟಾ, ಭಟ್ಕಳ ತಾಲೂಕಿನ ಪಿಂಚಣಿದಾರರ ಸಮಸ್ಯೆಗಳಿಗೆ ಕ್ರಿಯಾಶೀಲರಾಗಿ ಸ್ಪಂದಿಸುತ್ತಿದ್ದರು. ಅವರು ಕೆಲ ಸಮಯದ ಹಿಂದμÉ್ಟೀ ಪತ್ನಿಯನ್ನು ಕಳೆದುಕೊಂಡಿದ್ದರು.ಮೂವರು ಪುತ್ರರು ಇಬ್ಬರು ಪುತ್ರಿಯರು ಸಹಿತ ಅಪಾರ ಬಂಧುಗಳನ್ನು ಅಗಲಿದ್ದಾರೆ. ಅವರ ನಿಧನಕ್ಕೆ ಸಂಘದ ಕೇಂದ್ರ ಕಾರ್ಯಕಾರಿ ಸಮಿತಿಯ ಸದಸ್ಯರಾದ ಡಿ.ಡಿ ಮಡಿವಾಳ ಮತ್ತು ಸದಸ್ಯರು ಸಂತಾಪ ಸೂಚಿಸಿದ್ದಾರೆ.

Leave a Comment