ಹಳಿಯಾಳ :- ಬಿಜೆಪಿಯ ರಾಜ್ಯಸಭಾ ಸದಸ್ಯ ಅಶೋಕ ಗಸ್ತಿಯವರ ನಿಧನಕ್ಕೆ ಹಳಿಯಾಳ ಬಿಜೆಪಿ ಘಟಕದಿಂದ ಪಟ್ಟಣದಲ್ಲಿ ಶೃದ್ದಾಂಜಲಿ ಸಲ್ಲಿಸಲಾಯಿತು.
ಶೃದ್ದಾಂಜಲಿ ಕಾರ್ಯಕ್ರಮದಲ್ಲಿ ಮಾತನಾಡಿದ ಮಾಜಿ ಶಾಸಕ ಸುನೀಲ್ ಹೆಗಡೆ ಇತ್ತೀಚೆಗೆ ಕರ್ನಾಟಕದಿಂದ ರಾಜ್ಯಸಭೆಗೆ ಆಯ್ಕೆಯಾಗಿದ್ದ ಬಿಜೆಪಿಯ ಸಾಮಾನ್ಯ ಕಾರ್ಯಕರ್ತ ದಿ.ಅಶೋಕ್ ಗಸ್ತಿ ಅವರು ಅತ್ಯಂತ ಸರಳ ಸ್ವಭಾವದ ವ್ಯಕ್ತಿಯಾಗಿದ್ದರು. ಅವರ ಅಕಾಲಿಕ ಮರಣ ಪಕ್ಷಕ್ಕೆ ಅಪಾರ ಹಾನಿಯನ್ನುಂಟು ಮಾಡಿದೆ ಎಂದರು.
ಈ ಸಂದರ್ಭದಲ್ಲಿ ಹಳಿಯಾಳ ತಾಲೂಕಾ ಬಿಜೆಪಿ ಘಟಕದ ಅಧ್ಯಕ್ಷ ಗಣಪತಿ ಕರಂಜೆಕರ, ಪ್ರಮುಖರಾದ ಶಿವಾಜಿ ನರಸಾನಿ, ಅನಿಲ್ ಮುತ್ನಾಳೆ, ನಾಗೇಂದ್ರ ಕುರಬುರ, ವಾಸುದೇವ ಪೂಜಾರಿ, ತಾನಾಜಿ ಪಟ್ಟೇಕರ, ಯಲ್ಲಪ್ಪಾ ಹೊನ್ನೋಜಿ, ಸವಿತಾ ಸಮಾಜದ ಸದಸ್ಯರು, ಪಕ್ಷದ ಕಾರ್ಯಕರ್ತರು ಇದ್ದರು.

Leave a Comment