ಅಂಕೋಲಾ: ತಾಲೂಕಿನ ಪೂಜಗೇರಿಯ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಇಂದು ಸಾಧಕ ಶಿಕ್ಷಕರಿಗೆ ಸನ್ಮಾನಿಸಲಾಯಿತು. ಪ್ರಾಚಾರ್ಯ ಡಾ. ಎಸ್.ವಿ. ನಾಯಕ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ವಿದ್ಯಾರ್ಥಿಗಳಲ್ಲಿ ಜ್ಞಾನದ ಆಗರವನ್ನು ತುಂಬುವಲ್ಲಿ ಶಿಕ್ಷಕರು ಬಹುಮುಖ್ಯ ಪಾತ್ರವನ್ನು ವಹಿಸುತ್ತಾರೆ. ಇಂತಹ ಮಹತ್ಕಾರ್ಯ ಕೈಗೊಳ್ಳುವ ಶಿಕ್ಷಕರನ್ನು ಸನ್ಮಾನಿಸಿ ಗೌರವಿಸುತ್ತಿರುವುದು ನಮ್ಮೆಲ್ಲರಿಗೂ ಹೆಮ್ಮೆ ತಂದಿದೆ ಎಂದು ಹೇಳಿದರು. ಪ್ರೊ. ಬಿ.ಆರ್. ರಾಜು ಅಧ್ಯಕ್ಷತೆ ವಹಿಸಿದ್ದರು. ಕಾರ್ಯದರ್ಶಿ ಶಶಿಧರ ಶೇಣ್ವಿ, ಲಯನ್ಸ್ ಸದಸ್ಯರಾದ ಕಮಲಾಕರ ಬೋರಕರ, ಡಾ. ಶಾಂತಾರಾಮ ಶಿರೋಡ್ಕರ, ಪ್ರಶಾಂತ ಶೆಟ್ಟಿ, ಎನ್.ಎಚ್. ನಾಯ್ಕ ಸೇರಿದಂತೆ ಹಲವರು ಉಪಸ್ಥಿತರಿದ್ದರು.

Leave a Comment